ಕಾರು ಬಿಟ್ಟು ಬಸ್‍ನಲ್ಲಿ ಸಂಚರಿಸಿ ಮಲೆನಾಡ ಸೌಂದರ್ಯ ಸವಿದ ತೇಜಸ್ವಿ ಸೂರ್ಯ ದಂಪತಿ

Public TV
1 Min Read
Tejasvi Surya 1

ಚಿಕ್ಕಮಗಳೂರು: ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ (Tejasvi Surya) ದಂಪತಿ ಕಾರು (Car) ಬಿಟ್ಟು, ಬಸ್‍ನಲ್ಲಿ ರೌಂಡ್ಸ್ ಹಾಕಿದ್ದಾರೆ.

ಮಲೆನಾಡಿನ ತಳುಕು ಬಳುಕಿನ ರಸ್ತೆಗಳಲ್ಲಿ ಮಲೆನಾಡಿನ ಸೌಂದರ್ಯವನ್ನು ಸವಿಯಲು ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಬಸ್‍ನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳಸದ ಖಾಸಗಿ ಬಸ್‍ನಲ್ಲಿ ಪತ್ನಿ ಜೊತೆ ಬಂದಾಸ್ ಸಂಚಾರ ಮಾಡಿ, ತಾಲೂಕಿನ ಪ್ರವಾಸಿ ತಾಣಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ.

ಶನಿವಾರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಆಗಮಿಸಿರುವ ತೇಜಸ್ವಿ ಸೂರ್ಯ ದಂಪತಿ ಹೊರನಾಡು (Hornadu) ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಮಾಡಿಸಿ ದರ್ಶನ ಪಡೆದಿದ್ದರು.

ಉಡಪಿ ಶ್ರೀ ಕೃಷ್ಣ ಮಠಕ್ಕೆ ಸಹ ಅವರು ಭೇಟಿಕೊಟ್ಟಿದ್ದರು. ರಾತ್ರಿಯ ಮಹಾಪೂಜೆ ಮತ್ತು ಪ್ರತಿದಿನ ನಡೆಯುವ ರಥೋತ್ಸವ ಸೇವೆಯಲ್ಲಿ ನವದಂಪತಿ ಭಾಗಿಯಾಗಿದ್ದರು.

Share This Article