ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯಪುರ (Vijayapura)ಜಿಲ್ಲೆಯ ಉಕ್ಕಲಿ (Ukkali) ಗ್ರಾಮದ ಹೆಗಡಿಹಾಳ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಉತ್ನಾಳ ಗ್ರಾಮದ ನಿವಾಸಿಗಳಾದ ಭೀರಪ್ಪ ಗೋಡೆಕರ್ (26), ಹಣಮಂತ ಕಡ್ಲಿಮಟ್ಟಿ (32) ಎಂದು ಗುರುತಿಸಲಾಗಿದೆ. ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಗಂಭೀರವಾಗಿ ಗಾಯಗೊಂಡವ ಉಮೇಶ್ (30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್ ಕೊರತೆ ಇದ್ರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ: ಕೆ.ಜೆ.ಜಾರ್ಜ್
ಜಿಲ್ಲೆಯ ಉಕ್ಕಲಿ ಗ್ರಾಮದ ಹೆಗಡಿಹಾಳ ಕ್ರಾಸ್ ಬಳಿ ನಾಲ್ವರು ಸ್ವಿಫ್ಟ್ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿ ಹೊಡೆದು ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್ ಬೋರ್ಡ್