ಬೆಳಗಾವಿ: ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಬೆಳಗಾವಿಯ ಹಿಂದವಾಡಿ ಹನುಮಾನ್ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ
ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆ ಪಡೆದು ಗಿರಾಕಿ ಕರೆಸುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪುತ್ರನ ನಾಮಕರಣ ಸಂಭ್ರಮದ ಫೋಟೋ ಹಂಚಿಕೊಂಡ ಅಂಬಿ ಸೊಸೆ
ತಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.