ದಾವಣಗೆರೆ: ವರದಕ್ಷಿಣೆಗಾಗಿ ಪತಿಯೇ, ಪತ್ನಿಯ ಕತ್ತನ್ನು ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಂದಿರುವ ಘಟನೆ ಹರಿಹರ (Harihara) ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ(26) ಕೊಲೆಯಾದ ಪತ್ನಿ. ಕಳೆದ 7 ವರ್ಷದ ಹಿಂದೆ ಕುಟುಂಬಸ್ಥರು ಹರಳಹಳ್ಳಿ ಗ್ರಾಮದ ದೇವೇಂದ್ರಪ್ಪನ ಜೊತೆ ನೇತ್ರಾವತಿಯವರನ್ನು ಮದುವೆ ಮಾಡಿಕೊಟ್ಟಿದ್ದರು. ಮದುವೆ ಸಂದರ್ಭದಲ್ಲಿ ಕುಟುಂಬಸ್ಥರು ವರದಕ್ಷಿಣೆಯಾಗಿ 10 ತೊಲ ಬಂಗಾರ 1 ಲಕ್ಷ ರೂ. ನಗದು ಹಾಗೂ ಬೈಕ್ ಕೊಡಿಸಿದ್ದರು. ಮೃತ ನೇತ್ರಾವತಿ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಹೊಂದಿದ್ದರು. ಇದನ್ನೂ ಓದಿ: Gold Smuggling Case | ಸ್ವಂತ ಚಿನ್ನಾಭರಣ ಮಳಿಗೆ ಆರಂಭಿಸಲು ಪ್ಲ್ಯಾನ್ ಮಾಡಿದ್ದ ರನ್ಯಾ
ದೇವೇಂದ್ರಪ್ಪನ ಕುಟುಂಬಸ್ಥರು ವರದಕ್ಷಿಣೆಗಾಗಿ ಹಲವು ಬಾರಿ ಪೀಡಿಸಿ ಹಲ್ಲೆ ನಡೆಸಿದ್ದರು. ಈ ಹಿಂದೆ ಕೂಡಾ ನೇತ್ರಾವತಿ ಮೇಲೆ ಹಲ್ಲೆ ನಡೆಸಿದ್ದರು. ಹಿರಿಯರು ರಾಜಿ ಸಂಧಾನ ಮಾಡಿ ಇಬ್ಬರನ್ನು ಒಂದು ಮಾಡಿದ್ದರು. ಆದರೆ ಸೋಮವಾರ ರಾತ್ರಿ ದೇವೇಂದ್ರಪ್ಪ ಹಾಗೂ ಕುಟುಂಬಸ್ಥರು ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ನೇತ್ರಾವತಿ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ
ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ನೇತ್ರಾವತಿ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.