ನವದೆಹಲಿ: ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಪ್ರಕರಣ ಸಂಬಂಧ ತನಿಖೆ ನಡೆಸಲು ಹೈಕೋರ್ಟ್ 2018 ರಲ್ಲಿ ಆದೇಶ ನೀಡಿತ್ತು. ಎಫ್‌ಐಆರ್ ರದ್ದು ಕೋರಿ ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶೋಕ್, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಗೆ ಸೂಚನೆ ನೀಡಿದೆ.
ಆ ಸಂದರ್ಭದಲ್ಲಿ ಬಗರ್‌ಹುಕುಂ ಮಂಜೂರಾತಿ ಸಮಿತಿಗೆ ಅಶೋಕ್ ಅಧ್ಯಕ್ಷರಾಗಿದ್ದರು. ಬೆಂಗಳೂರು ಉತ್ತರ ತಾಲ್ಲೂಕು ಸಮಿತಿ ಅಧ್ಯಕ್ಷರಾಗಿದ್ದರು. ಸೋಮನಹಳ್ಳಿಯಲ್ಲಿ 8 ಎಕರೆ ಭೂಮಿ ಅಕ್ರಮ ಹಂಚಿಕೆ ಮಾಡಿದ್ದ ಆರೋಪ ಅವರ ಮೇಲಿತ್ತು. ಪ್ರಕರಣದ ವಿಚಾರಣೆಯನ್ನು ಏ.22 ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.