ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಸಿಕಂದರ್’ (Sikandar) ಸಿನಿಮಾದ ಹಾಡು ರಿಲೀಸ್ ಆಗಿದೆ. ‘ಸಿಕಂದರ್ ನಾಚೇ’ ಎಂದು ಸಲ್ಮಾನ್ ಮತ್ತು ರಶ್ಮಿಕಾ ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:‘ಕಿಸ್ಸಿಕ್’ ಬೆಡಗಿಗೆ ಬೇಡಿಕೆ- ಬಹುಭಾಷೆಗಳಲ್ಲಿ ಶ್ರೀಲೀಲಾ ಬ್ಯುಸಿ
‘ಸಿಕಂದರ್ ನಾಚೇ’ ಫುಲ್ ಸಾಂಗ್ ರಿಲೀಸ್ ಆಗಿದೆ. ಸಲ್ಮಾನ್ ಜೊತೆ ರಶ್ಮಿಕಾ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ನಟನ ಹ್ಯಾಡ್‌ಸಮ್ ಲುಕ್, ರಶ್ಮಿಕಾ ಬ್ಯೂಟಿ ಮತ್ತು ಡ್ಯಾನ್ಸ್ ಎಲ್ಲವೂ ಪ್ರೇಕ್ಷಕರಿಗೆ ಮೆಚ್ಚುಗೆ ಆಗಿದೆ. ಮೊದಲ ಬಾರಿಗೆ ಸಲ್ಮಾನ್ ಮತ್ತು ರಶ್ಮಿಕಾ ಜೊತೆಯಾಗಿ ನಟಿಸಿರೋದ್ರಿಂದ ಸಿಕಂದರ್ ಮೇಲೆ ಫ್ಯಾನ್ಸ್‌ಗೆ ನಿರೀಕ್ಷೆಯಿದೆ. ಯೂಟ್ಯೂಬ್‌ನಲ್ಲಿ ಭರ್ಜರಿ ವಿವ್ಸ್ ಪಡೆದುಕೊಳ್ಳುತ್ತಿದೆ.
ಅಂದಹಾಗೆ, ಸಲ್ಮಾನ್, ರಶ್ಮಿಕಾ ಮಂದಣ್ಣ, ಮಗಧೀರ ನಟಿ ಕಾಜಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಸಾಜಿದ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಇನ್ನೂ ‘ಸಿಕಂದರ್’ ಚಿತ್ರದ ಟೀಸರ್, ಸಾಂಗ್ಸ್ ಎಲ್ಲವೂ ಫ್ಯಾನ್ಸ್‌ಗೆ ಮೆಚ್ಚುಗೆ ಆಗಿದೆ. ಮಾ.30ರಂದು ಸಿನಿಮಾ ರಿಲೀಸ್ ಆಗಲಿದೆ.
#SikandarNaache Out Now https://t.co/tvBtpG4UDu#SajidNadiadwala’s #Sikandar
Directed by @ARMurugadoss @iamRashmika #KabirLal@jam8studio @khan_ahmedasas @SameerAnjaan #AmitMishra @AkasaSing #SiddhantMiishhraa @NGEMovies @SKFilmsOfficial @ZeeMusicCompany @PenMovies…
— Salman Khan (@BeingSalmanKhan) March 18, 2025
ಇನ್ನೂ ಮೊದಲ ಬಾರಿಗೆ ಸಲ್ಮಾನ್ ಜೊತೆ ರಶ್ಮಿಕಾ ನಟಿಸಿರೋ ಕಾರಣ ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆಯಿದೆ. ಇತ್ತೀಚಿಗೆ ರಶ್ಮಿಕಾ ನಟಿಸಿದ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳು ಸೂಪರ್ ಸಕ್ಸಸ್ ಕಂಡಿದೆ. ಇತ್ತ ಸಲ್ಮಾನ್ ಇತ್ತೀಚೆಗೆ ನಟಿಸಿರುವ ಸಿನಿಮಾಗಳು ಚಿತ್ರಮಂದಿರದಲ್ಲಿ ಮಕಾಡೆ ಮಲಗಿದೆ. ಹಾಗಾಗಿ ಸಿಕಂದರ್ ಚಿತ್ರ ಸಕ್ಸಸ್ ಕಾಣುತ್ತಾ? ಎಂಬುದನ್ನು ಕಾದುನೋಡಬೇಕಿದೆ.