ಸೋಮವಾರ ರಾಜಕುಮಾರ ಚಿತ್ರ ನೋಡೋರಿಗೆ ವಿಶೇಷ ಆಫರ್

Public TV
1 Min Read
RAJAKUMARA

ಬೆಂಗಳೂರು: ಸೋಮವಾರ ವರನಟ ಡಾ.ರಾಜಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜಕುಮಾರ ಚಿತ್ರತಂಡದಿಂದ ಅಭಿಮಾನಿಗಳಿಗೆ ವಿಶೇಷ ಆಫರ್ ನೀಡಲಾಗಿದೆ.

ಸೋಮವಾರ ರಾಜಕುಮಾರ ಸಿನಿಮಾ ನೋಡುವ ಪ್ರೇಕ್ಷಕರಿಗೆ ಪ್ರತಿ ಟಿಕೆಟ್ ಬೆಲೆಯಲ್ಲಿ ಅರ್ಧದಷ್ಟು ಹಣ ಕಡಿತಗೊಳಿಸಲಾಗುತ್ತದೆ. ರಾಜ್ಯದಲ್ಲೆಡೆ ರಾಜಕುಮಾರ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಡಾ.ರಾಜ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಕ್ಕಾಗಿ ಚಿತ್ರತಂಡದಿಂದ ಈ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ.

ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಚಿತ್ರ ಮಾರ್ಚ್ 24ರಂದು ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ.

rajakumara photos images 36415

`ಮಿಸ್ಟರ್ ಅಂಡ್ ಮಿಸಸ್ ರಾಮಚಾರಿ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಇದೇ ಮೊದಲ ಬಾರಿಗೆ ದಕ್ಷಿಣದ ಸುಂದರಿ ಪ್ರಿಯಾ ಆನಂದ್ ಕನ್ನಡ ಚಿತ್ರದಲ್ಲಿ ನಟಿಸಿದ್ದು, ಚೊಚ್ಚಲ ಚಿತ್ರದಲ್ಲೇ ಪುನೀತ್ ರಾಜ್ ಕುಮಾರ್ ಗೆ ನಾಯಕಿಯಾಗಿ ಕಾಣಿಸಿಕೊಡಿದ್ದಾರೆ.

ಪ್ರಕಾಶ್ ರೈ, ಅನಂತ್ ನಾಗ್, ಅಚ್ಯುತ್ ಕುಮಾರ್, ಸಾಧುಕೋಕಿಲಾ, ಚಿಕ್ಕಣ್ಣ, ರಂಗಾಯಣ ರಘು, ತಮಿಳು ನಟ ಶರತ್ ಕುಮಾರ್, ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ವೇಳೆ ಹೆಲಿಕಾಪ್ಟರ್ನಿಂದ ಹಾರಿ ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮುಳುಗಿ ಮೃತಪಟ್ಟಿದ್ದ ಅನಿಲ್ ಸೇರಿದಂತೆ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ.

RAJAKUMARA 12

Share This Article
Leave a Comment

Leave a Reply

Your email address will not be published. Required fields are marked *