Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಸಸ್ಪೆಂಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಸಸ್ಪೆಂಡ್‌

Bengaluru City

ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಸಸ್ಪೆಂಡ್‌

Public TV
Last updated: March 21, 2025 4:56 pm
Public TV
Share
2 Min Read
Session 1
SHARE

ಬೆಂಗಳೂರು: ವಿಧಾನಸಭೆ (Vidhan Sabha) ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ (UT Khader) ರೂಲಿಂಗ್‌ ಹೊರಡಿಸಿದ್ದಾರೆ.

ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಅಶ್ವಥನಾರಾಯಣ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು, ಎಂ.ಆರ್ ಪಟೇಲ್, ಚನ್ನಬಸಪ್ಪ, ಉಮಾನಾಥ್ ಕೋಟ್ಯನ್, ಸುರೇಶ್ ಗೌಡ, ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್, ಸಿಕೆ ರಾಮಮೂರ್ತಿ, ಯಶ್ಪಾಲ್ ಸುವರ್ಣ, ಹರಿಶ್ ಬಿ.ಪಿ, ಭರತ್ ಶೆಟ್ಟಿ, ಬಸವರಾಜ ಮತ್ತಿಮೂಡ್, ಧೀರಜ್ ಮುನಿರಾಜು, ಮುನಿರತ್ನ, ಚಂದ್ರು ಲಮಾಣಿ ಅವರನ್ನ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದರು. ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದರು.

ಹನಿಟ್ರ್ಯಾಪ್‌ (Honey Trap) ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದರು. ಇದರಿಂದ ಅಸಮಾಧಾನಗೊಂಡ ಸ್ಪೀಕರ್‌ ಕಲಾಪವನ್ನು ಮುಂದೂಡಿದ್ದರು. ಮಧ್ಯಾಹ್ನದ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದ 18 ಶಾಸಕರನ್ನು 6 ತಿಂಗಳ ಕಾಲ ಸ್ಪೆಂಡ್‌ ಮಾಡಿ ಸ್ಪೀಕರ್‌ ರೂಲಿಂಗ್‌ ಹೊರಡಿಸಿದರು.

ಅಮಾನತುಗೊಂಡ ಶಾಸಕರಿಗೆ ಈ ಷರತ್ತುಗಳು ಅನ್ವಯ

1. ಶಾಸಕರು ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ.
2. ಶಾಸಕರು ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ.
3. ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಅವರುಗಳ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
4. ಅಮಾನತ್ತಿನ ಅವಧಿಯಲ್ಲಿ ಅವರು ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ.
5. ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಅವರು ಮತದಾನ ಮಾಡುವಂತಿಲ್ಲ.
6. ಅಮಾನತ್ತಿನ ಅವಧಿಯಲ್ಲಿ ಅವರುಗಳು ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.

ಸ್ಪೀಕರ್‌ ಪೀಠಕ್ಕೆ ಅಪಮಾನ!
ಇಂದು ವಿಧಾನಸಭೆಯ ಅಧಿವೇಶನದ ಕಡೆಯ ದಿನ. ಹೀಗಾಗಿ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್‌ ಮತ್ತು ಸುನಿಲ್‌ ಕುಮಾರ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ಜಡ್ಜ್‌ಗಳ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ. ಹೀಗಾಗಿ ಸರ್ಕಾರ ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ವಿಪಕ್ಷಗಳ ಆಗ್ರಹಕ್ಕೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್‌ ಅವರು ಈ ಪ್ರಕರಣವನ್ನುಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು. ನಂತರ ಸಿದ್ದರಾಮಯ್ಯ ನವರು ಬಜೆಟ್‌ ಭಾಷಣಕ್ಕೆ ಉತ್ತರ ನೀಡಲು ಆರಂಭಿಸಿರು. ಈ ವೇಳೆ ವಿಪಕ್ಷ ಸದಸ್ಯರು ಬಾವಿಗೆ ಇಳಿದು ಪ್ರತಿಭಟಿಸಿದರು. ವಿಪಕ್ಷಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಸಿಎಂ ತಮ್ಮ ಭಾಷಣವನ್ನು ಮುಂದುವರಿಸಿದರು.

ಸಿಎಂ ಭಾಷಣದ ಬಳಿಕ ಸರ್ಕಾರ ಹಲವು ಮಸೂದೆಗಳಿಗೆ ಅಂಗೀಕಾರವನ್ನು ಪಡೆದುಕೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್‌ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದರು. ಗದ್ದಲ ಜಾಸ್ತಿ ಆಗುತ್ತಿದ್ದಂತೆ ಖಾದರ್‌ ಕಲಾಪವನ್ನು ಮುಂದಕ್ಕೆ ಹಾಕಿದ್ದರು.

ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ಕೇಸರಿ ಶಾಲು ಧರಿಸಿ ಸದನ ಪ್ರವೇಶಿಸಿದರು. ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಒತ್ತಾಯಿಸಿ ಧರಣಿ ಮುಂದುವರಿಸಿದರು. ಸಿಎಂ ರಾಜೀನಾಮೆಗೆ ಆಗ್ರಹಿಸಿದರು.

TAGGED:bjpHoney TrapkarnatakaVidhansabhaಕರ್ನಾಟಕಬಿಜೆಪಿವಿಧಾನಸಭೆಹನಿಟ್ರ್ಯಾಪ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
5 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
25 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
32 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
45 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?