ರಾಹುಲ್‌ ಗಾಂಧಿ, ಕಾಮೆಡಿಯನ್‌ ಇಬ್ಬರೂ ಸಂವಿಧಾನ ಓದಿಲ್ಲ – ಕಾಮ್ರಾ ವಿರುದ್ಧ ಕಾನೂನು ಕ್ರಮ: ಫಡ್ನವಿಸ್‌

Public TV
2 Min Read
Devendra Fadnavis 1

– ಕಿಚ್ಚು ಹೊತ್ತಿಸಿದ ಕಾಮ್ರಾ ʻದೇಶದ್ರೋಹಿʼ ಹೇಳಿಕೆ

ಮುಂಬೈ: ಡಿಸಿಎಂ ಏಕನಾಥ್ ಶಿಂಧೆ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ಸ್ಟ್ಯಾಂಡ್-ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ವಿರುದ್ಧ ಶಿವಸೇನಾ ಕಾರ್ಯಕರ್ತರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ದೇವೇಂದ್ರ ಫಡ್ನವಿಸ್‌ (Devendra Fadnavis) ಅವರು, ಕಾಮ್ರಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

rahul gandhi

ಕಾಮ್ರಾ ಮಾಡಿದ್ದು ಕಾಮೆಡಿ ಅಲ್ಲ, ಶಿಂಧೆ ಅವರಿಗೆ ಮಾಡಿದ ಅವಮಾನ, ಅದಕ್ಕಾಗಿ ಅವರು ಕ್ಷಮೆ ಕೇಳಬೇಕು. ಇಂತಹ ಅಪಮಾನಗಳನ್ನು ಸಹಿಸಲಾಗಲ್ಲ. ಕಳೆದ ಚುನಾವಣೆಗಳು ದೇಶದ್ರೋಹಿಗಳು ಯಾರೆಂಬುದನ್ನು ಸಾಬೀತು ಮಾಡಿವೆ. ಹೀಗಿದ್ದಾಗ ಅಂತಹ ದೊಡ್ಡ ನಾಯಕನನ್ನು ದ್ರೋಹಿ (Traitor) ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ. ಕಾಮ್ರಾ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Kunal Kamra 2

ರಾಹುಲ್‌ ಗಾಂಧಿಯೂ ಸಂವಿಧಾನ ಓದಿಲ್ಲ:
ಕುನಾಲ್‌ ಕಾಮ್ರಾ ಅವರು ರಾಹುಲ್ ಗಾಂಧಿ (Rahul Gandhi) ತೋರಿಸಿದ ಅದೇ ಕೆಂಪು ಸಂವಿಧಾನದ ಪುಸ್ತಕವನ್ನು ಪೋಸ್ಟ್ ಮಾಡಿದ್ದಾರೆ. ಇಬ್ಬರೂ ಸಂವಿಧಾನ ಓದಿಲ್ಲ. ಸಂವಿಧಾನವು ನಮಗೆ ಮಾತನಾಡುವ ಸ್ವಾತಂತ್ರ್ಯ ನೀಡಿದೆ, ಆದರೆ ಅದಕ್ಕೆ ಮಿತಿಗಳಿವೆ. ಈ ದೇಶದಲ್ಲಿ ಸ್ಟ್ಯಾಂಡ್‌ ಅಪ್‌ ಕಾಮಿಡಿ ಮಾಡಲು ಸ್ವಾತಂತ್ರ್ಯವಿದೆ, ಹಕ್ಕಿದೆ. ಹಾಗಂತ ಓರ್ವ ಉಪಮುಖ್ಯಮಂತ್ರಿಗಳ ಮಾನಹಾನಿ ಮಾಡುವುದನ್ನು ಸಹಿಸಲ್ಲ. 2024ರ ಚುನಾವಣೆಯಲ್ಲೇ ಮಹಾರಾಷ್ಟ್ರದ ಜನ ʻದೇಶದ್ರೋಹಿʼ ಯಾರೆಂದು ನಿರ್ಧರಿಸಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

Mumbai 2

2024ರ ವಿಧಾನಸಭಾ ಚುನಾವಣೆಯಲ್ಲಿ ಜನ ನಮಗೆ ಮತ ನೀಡಿ ಬೆಂಬಲಿಸಿದ್ದಾರೆ, ದೇಶದ್ರೋಹಿಗಳನ್ನು ಮನೆಗೆ ಕಳುಹಿಸಿದ್ದಾರೆ. ಬಾಳಾಸಾಹೇಬ್ ಠಾಕ್ರೆಯವರ ಜನಾದೇಶ ಮತ್ತು ಸಿದ್ಧಾಂತವನ್ನು ಅವಮಾನಿಸಿದವರಿಗೆ ಜನರು ತಮ್ಮ ಸ್ಥಾನವನ್ನು ತೋರಿಸಿದ್ದಾರೆ. ಹಾಸ್ಯವನ್ನು ಸೃಷ್ಟಿಸಬಹುದು, ಆದರೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫಡ್ನವಿಸ್‌ ಆಕ್ರೋಶ ಹೊರಹಾಕಿದ್ದಾರೆ.

Kunal Kamra

ಕುನಾಲ್‌ ಕಾಮ್ರಾ ಹೇಳಿದ್ದೇನು?
ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು. ಏಕನಾಥ್‌ ಶಿಂಧೆ – ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್‌ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Share This Article