– ಕಾಂಗ್ರೆಸ್‌ನಿಂದ 99 ಬಾರಿ ಸಂವಿಧಾನ ತಿದ್ದುಪಡಿ ಆಗಿದೆ ಎಂದ ಮಾಜಿ ಶಾಸಕ
ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ (Muslims 4% Reservation) ಕೊಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದು ಡಿಸಿಎಂ ಡಿಕೆಶಿವಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇಶದ, ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತ ಜೆಡಿಎಸ್ ಎಸ್ಸಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ಅನ್ನದಾನಿ (K. Annadani) ಆಗ್ರಹಿಸಿದ್ದಾರೆ.
ಇಲ್ಲಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಮಿತ್ ಶಾ (Amit Shah) ಅವರು ಅಂಬೇಡ್ಕರ್ ಬಗ್ಗೆ ಮಾತಾಡಿದ್ರು ಅಂತ ಕಾಂಗ್ರೆಸ್ (Congress) ಅವರು ದೊಡ್ಡ ಆಂದೋಲನ ಮಾಡಿದ್ರು. ಈಗ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಸಂವಿಧಾನ ಬದಲಾವಣೆ ಮಾಡೋ ಮಾತುಗಳನ್ನಾಡಿದ್ದಾರೆ. ಯಾಕೆ ಅವರ ಮೇಲೆ ಕ್ರಮ ಇಲ್ಲ ಅಂತ ಕಾಂಗ್ರೆಸ್ ಹೈಕಮಾಂಡ್‌ಗೆ ಪ್ರಶ್ನೆ ಕೇಳಿದ್ರು. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ
ರಾಹುಲ್ ಗಾಂಧಿ ಅವರು ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಸಂವಿಧಾನ ರಕ್ಷಣೆ ನಾವೇ ಮಾಡೋದು ಅಂದರು. ಈಗ ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಮಾಡ್ತೀನಿ ಅಂದರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸುಮ್ಮನೆ ಇದ್ದಾರೆ. ಡಿಕೆಶಿ ಹೇಳಿಕೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡಬೇಕು ಅಂತ ಆಗ್ರಹ ಮಾಡಿದ್ರು. ಇದನ್ನೂ ಓದಿ: ಹಿಂದೂಗಳು ಸುರಕ್ಷಿತವಾಗಿದ್ದರೆ, ಮುಸ್ಲೀಮರೂ ಸುರಕ್ಷಿತ – ಯೋಗಿ ಆದಿತ್ಯನಾಥ್
ಕಾಂಗ್ರೆಸ್ ನವರ ಮನಸು ಕೊಳಕಾಗಿದೆ. ಅಂಬೇಡ್ಕರ್ ವಿರೋಧಿಗಳು ಕಾಂಗ್ರೆಸ್ ಅವರು. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಅವರು. ಇಂದಿರಾಗಾಂಧಿ ಸಂವಿಧಾನ ವಿರೋಧಿಸಿ ತುರ್ತು ಪರಿಸ್ಥಿತಿಯ ಘೋಷಣೆ ಮಾಡಿದ್ರು ಅಂತ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ
ಡಿಸಿಎಂ ಆಗೋಕೆ ಸಂವಿಧಾನ ಕಾರಣ:
ಡಿಕೆಶಿ ಡಿಸಿಎಂ ಆಗೋಕೆ ಸಂವಿಧಾನ ಕಾರಣ. 99 ಬಾರಿ ಸ್ವಾತಂತ್ರ್ಯ ಬಂದಾಗಿನಿಂದ ಸಂವಿಧಾನ ತಿದ್ದುಪಡಿ ಮಾಡಿರೋದು ಕಾಂಗ್ರೆಸ್‌ನವರು. ನರೇಂದ್ರ ಮೋದಿ ಅವರು ಒಂದೇ ಒಂದು ಅರ್ಟಿಕಲ್ ತಿದ್ದಿಲ್ಲ. ನೆಹರು, ಇಂದಿರಾಗಾಂಧಿ, ಮನಮೋಹನ್ ಸಿಂಗ್ ಸಂವಿಧಾನ ತಿದ್ದುಪಡಿ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ಏನ್ ಮಾಡ್ತಿದ್ದೀರಾ? ಡಿಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮಾತಾಡಿ, ಮುಸ್ಲಿಮರಿಗೆ ಮೀಸಲಾತಿ ಕೊಡಲು ಸಂವಿಧಾನ ಬದಲಾವಣೆ ಮಾಡ್ತೀನಿ ಅಂತ ಹೇಳಿದ್ದಾರೆ. ಈ ಬಗ್ಗೆ ಮಾತಾಡಿ ಅಂತ ಪ್ರಿಯಾಂಕ್ ಖರ್ಗೆಗೆ ಆಗ್ರಹ ಮಾಡಿದ್ರು.
ಡಿಕೆಶಿ ಹೇಳಿಕೆ ಖಂಡಿಸಿ ಜೆಡಿಎಸ್ SC ಘಟಕದಿಂದ ಪ್ರತಿಭಟನೆ ಮಾಡಲಾಗುತ್ತದೆ. ಶುಕ್ರವಾರ ರಾಜ್ಯಾದ್ಯಂತ ಹೋರಾಟ ಮಾಡ್ತೀವಿ. ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು. ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆದು ರಾಜೀನಾಮೆ ಕೊಡಬೇಕು ಅಂತ ಆಗ್ರಹ ಮಾಡಿದ್ರು. ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದ್ದಕ್ಕೆ ಟಿಕೆಟ್ ಬಿಜೆಪಿ ಕೊಡದೇ ಇರೋದು ನಾವು ಒಪ್ಪುತ್ತೇವೆ. ಬಿಜೆಪಿ ಶಿಸ್ತುಕ್ರಮ ನಾವು ಸ್ವಾಗತ ಮಾಡ್ತೀನಿ. ಅದೇ ರೀತಿ ಡಿಕೆಶಿವಕುಮಾರ್ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹ ಮಾಡಿದ್ರು. ಇದನ್ನೂ ಓದಿ: ಮಹಾನಗರ ಪಾಲಿಕೆಯ ಗಾರ್ಬೇಜ್ ರೀತಿ ರಾಜ್ಯ ಸರ್ಕಾರದ ಆಡಳಿತ: ಛಲವಾದಿ ನಾರಾಯಣಸ್ವಾಮಿ ಕಿಡಿ