ತಾಯಿ ಚಾಮುಂಡೇಶ್ವರಿ ದೇವಿ ಭಕ್ತರಿಗೆ ಕ್ಷಮೆ ಕೋರಿದ ‌’ಬಿಗ್‌ ಬಾಸ್’ ರಕ್ಷಕ್ ಬುಲೆಟ್

Public TV
2 Min Read
rakshak bullet

‘ಬಿಗ್ ಬಾಸ್’ (BBK 10) ರಕ್ಷಕ್ ಬುಲೆಟ್ (Rakshak Bullet) ಅವರು ಇತ್ತೀಚಿನ ಶೋವೊಂದರಲ್ಲಿ ಡೈಲಾಗ್ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ಮತ್ತು ಹಿಂದೂ ಸಂಘಟನೆಗಳು ತಿರುಗಿಬಿದ್ದಿದ್ದರು. ಈ ಬೆನ್ನಲ್ಲೇ ರಕ್ಷಕ್ ಕ್ಷಮೆಯಾಚಿಸಿದ್ದಾರೆ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ:ರಾಮ್ ಚರಣ್ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ ಶಿವಣ್ಣ

rakshak bullet

ಸೋಶಿಯಲ್ ಮೀಡಿಯಾದಲ್ಲಿ ನಟ ಪೋಸ್ಟ್ ಮಾಡಿ ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚೆಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗ್ ಅನ್ನು ಒಂದು ಸ್ಕಿಟ್‌ನಲ್ಲಿ ಹೇಳಿದ್ದೆ, ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ (Bullet Prakash) ಅವರು ನನ್ನ ತಾಯಿ ಹಾಗೂ ಕುಟುಂಬಸ್ಥರು ಪರಮ ಭಕ್ತರು. ನಮ್ಮ ತಂದೆಯವರು ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ.

rakshak bullet

ನಾವು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ಆ ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ (Chamundeshwari) ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಆರಂಭಿಸುತ್ತೇನೆ. ನಾನು ಭಕ್ತಾಧಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ ನೋವುಂಟು ಮಾಡುವ ಕೆಲಸ ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ರಕ್ಷಕ್ ಕ್ಷಮೆ ಕೋರಿದ್ದಾರೆ.

ಅಂದಹಾಗೆ, ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋವೊಂದರ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ಒಂದು ವಿವಾದಕ್ಕೆ ಕಾರಣವಾಗಿತ್ತು. ಇದು ಸೋಷಿಯಲ್ ಮಿಡಿಯಾದಲ್ಲೂ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು, ಇದು ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಜರ್‌ಲ್ಯಾಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ ಎಂದು ಡೈಲಾಗ್ ಹೊಡೆದಿದ್ದರು. ಸಹನಟಿಗೆ ಡೈಲಾಗ್ ಮೂಲಕ ಹೊಗಳುವ ಭರದಲ್ಲಿ ರಕ್ಷಕ್ ಯಡವಟ್ಟು ಮಾಡಿಕೊಂಡಿದ್ದರು. ಇದು ಹಿಂದೂ ಹೋರಾಟಗಾರರ ಕೋಪಕ್ಕೆ ಕಾರಣವಾಗಿತ್ತು.

Share This Article