ಕುಡಿಯುವ ನೀರಿಗೂ ಕಂಟಕವಾ? – ಮಿನರಲ್‌ ವಾಟರ್‌ಬಾಟಲ್‌ನಲ್ಲಿ ಹಾನಿಕಾರಕ ಅಂಶ ಪತ್ತೆ!

Public TV
1 Min Read
Mineral Water Bottle

ಬೆಂಗಳೂರು: ಎಲ್ಲಾ ಜೀವಿಗಳಿಗೂ ನೀರು (Water) ಅತ್ಯಗತ್ಯ. ಪ್ರಮುಖ ದೈಹಿಕ ಪ್ರಕ್ರಿಯೆಗಳನ್ನು ಬೆಂಬಲಿಸುವುದರ ಜೊತೆಗೆ, ನೀರು ಉತ್ಪಾದಿಸಲು ಸಾಧ್ಯವಾಗದ ದೇಹಕ್ಕೆ ಅಗತ್ಯವಾದ ಪೋಷಕಾಂಶ ಒದಗಿಸುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಬೆಂಗಳೂರಿನಂತಹ (Bengaluru) ಮಹಾನಗರಗಳಲ್ಲಿ ಕುಡಿಯುವ ನೀರು ವಿಷವಾಗುತ್ತಿದೆಯೇ ಅನ್ನೋ ಆತಂಕ ಜನರನ್ನು ಆವರಿಸಿದೆ.

DRINKING WATER

ಹೌದು. ರಾಜ್ಯದಲ್ಲಿ ಪೂರೈಕೆಯಾಗುತ್ತಿರುವ ಕುಡಿಯುವ ಮಿನರಲ್ ವಾಟರ್‌ ಬಾಟಲ್‌ಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿರುವುದು ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ (Food Safety Department) ವರದಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಆಹಾರ ಪ್ರಿಯರಿಗೆ ಶಾಕ್‌ – ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

ಇತ್ತೀಚೆಗೆ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ ಸುಮಾರು 160 ಮಿನರಲ್‌ ವಾಟರ್‌ ಬಾಟಲ್‌ಗಳನ್ನ (Mineral Water Bottle) ಸ್ಯಾಂಪಲ್‌ ಟೆಸ್ಟ್‌ಗೆ ಕಳುಹಿಸಿತ್ತು. ಈ ಪೈಕಿ ಈಗಾಗಲೇ 100ಕ್ಕೂ ಹೆಚ್ಚು ಬಾಟಲ್‌ಗಳ ವರದಿ ಕೈಸೇರಿದೆ. ಇಲಾಖೆ ಕಳುಹಿಸಿದ್ದ ಮಾದರಿಗಳಲ್ಲಿ 50% ನೀರು ಅನ್‌ಸೇಫ್‌ ಆಗಿದೆ. ಲೋಕಲ್ ಮಿನರಲ್ ವಾಟರ್ ಅನ್ ಸೇಫ್ ಅಂತ ರಿಪೋರ್ಟ್‌ ಬಂದಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಬಟಾಣಿ ಪ್ರಿಯರೇ ಎಚ್ಚರ – ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ!

ಮಿನರಲ್ ವಾಟರ್ ಬಾಟಲ್ ವರದಿಯಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ತುಂಬಾ ಸಮಯದಿಂದ ನೀರು ಶೇಖರಣೆ ಮಾಡುವುದರಿಂದ ಪಾಚಿ ಅಂಶಗಳು ಕಂಡುಬಂದಿವೆ. ಅಲ್ಲದೇ ಕೆಲ ಕಂಪನಿಗಳು ಕಲುಷಿತ ನೀರು, ಬೋರ್ವೆಲ್ ನೀರನ್ನು ಬಾಟಲ್ ಮೂಲಕ ಮಾರಾಟ ಮಾಡುತ್ತಿದ್ದದ್ದು ಕಂಡುಬಂದಿದೆ. ನೀರನ್ನು ಶುದ್ದೀಕರಿಸದೇ ನೇರವಾಗಿ ಮಾರುಕಟ್ಟೆಗೆ ಸರಬರಾಜು ಮಾಡುತ್ತಿದ್ದ ಕಾರಣ ಹಾನಿಕಾರಕ ಅಂಶ ಪತ್ತೆಯಾಗಿರುವುದು ಕಂಡುಬಂದಿದೆ. ಇಂತಹ ಕಲುಷಿತ ನೀರು ಕುಡಿಯೋದ್ರಿಂದ ವಾಂತಿ, ಭೇದಿ, ಜ್ವರ, ಸುಸ್ತು ಕಾಣಿಸಿಕೊಳ್ಳುತ್ತೆ, ಅದ್ರಲ್ಲೂ ಮಕ್ಕಳಿಗೆ ಬೇಗನೇ ಆರೋಗ್ಯದ ಸಮಸ್ಯೆ ಉಂಟಾಗುತ್ತದೆ ಎಂದು ಆಹಾರ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಯಿ ಚಪ್ಪರಿಸುವ ಟೊಮೆಟೊ ಸಾಸ್‌ನಲ್ಲಿ ಅಪಾಯಕಾರಿ ರಾಸಾಯನಿಕ ಬಳಕೆ 

Share This Article