ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್‌ಗೆ ಉತ್ತರ ಕೊಟ್ಟಿದ್ದೇನೆ: ರೇಣುಕಾಚಾರ್ಯ

Public TV
1 Min Read
MP RENUKACHARYA

ಬೆಂಗಳೂರು: ನಾನು ಬಿಜೆಪಿ (BJP) ಶಿಸ್ತಿನ ಸಿಪಾಯಿಯಾಗಿದ್ದು ಕೇಂದ್ರೀಯ ಶಿಸ್ತು ಸಮಿತಿ ನೀಡಿದ ನೋಟಿಸ್‌ಗೆ (Notice) ಉತ್ತರ ನೀಡಿದ್ದೇನೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿದ್ದಾರೆ.

ನಾನು ರಾಷ್ಟ್ರೀಯ ನಾಯಕರ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಯಡಿಯೂರಪ್ಪ, ರಾಜ್ಯಾಧ್ಯಕ್ಷರ ಬಗ್ಗೆ ಮಾತನಾಡಿದ್ದಕ್ಕೆ ನಾನು ಮಾತನಾಡಿದ್ದೇನೆ ಅಷ್ಟೇ. ಯಡಿಯೂರಪ್ಪ ವಿರುದ್ಧ ಸದನದ ಒಳಗೆ, ಹೊರಗೆ ಮಾತನಾಡಿ ಅಪಮಾನ ಮಾಡಿದ್ದರು. ಅದು ರಾಷ್ಟ್ರೀಯ ನಾಯಕರ ಬಗ್ಗೆ ಮಾತನಾಡಿದಂತೆ ಎಂದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ಖಂಡಿಸಿ ಪಂಚಮಸಾಲಿ, ಹಿಂದೂ ಸಂಘಟನೆಗಳ ಪ್ರತಿಭಟನೆ

 

ನಾನು ಪಕ್ಷಕ್ಕೆ ಮುಜುಗರ ತಂದಿಲ್ಲ, ರಾಷ್ಟ್ರೀಯ ನಾಯಕರಿಗೂ ಮುಜುಗರ ತಂದಿಲ್ಲ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಮಾತನಾಡಿದ್ದೇನೆ. ಸಂಘಟನೆ ಮಾತೃ ಸಮಾನ. ನಾನು ಯಾವತ್ತೂ ಪಕ್ಷ ಸಂಘಟನೆ ವಿರುದ್ಧ ಮಾತನಾಡುವುದಿಲ್ಲ ಎಂದರು.  ಇದನ್ನೂ ಓದಿ: ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿಯ ಕಪಿಮುಷ್ಟಿಯಲ್ಲಿದೆ: ಹೆಚ್‌ಡಿಕೆ

ಇದೇ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಠಾಧೀಶರು, ಖಾವಿ ಬಗ್ಗೆ ನನಗೆ ಅಪಾರ ಗೌರವ ಭಕ್ತಿ ಇದೆ. ಸ್ವಾಮೀಜಿ ಅವರು ಕೈಗೊಂಡ ಎಲ್ಲಾ ಹೋರಾಟಗಳಲ್ಲೂ ನಾನು ಭಾಗಿಯಾಗಿದ್ದೇ‌ನೆ. ನೀವು ಒಬ್ಬ ವ್ಯಕ್ತಿ ಪರವಾಗಿ ಧ್ವನಿ ಎತ್ತುವುದು ಬೇಡ. ಭಕ್ತರು ತಪ್ಪು ಮಾಡಿದಾಗ ತಿದ್ದಬೇಕು. ನಾನು ಟೀಕೆ ಮಾಡುತ್ತಿಲ್ಲ, ಮನವಿ ಮಾಡುತ್ತೇನೆ. ನನಗೆ ಶ್ರೀಗಳ ಬಗ್ಗೆ ಅಪಾರ ಗೌರವ ಇದೆ ಎಂದು ಹೇಳಿದರು.

 

Share This Article