ಚಾಮರಾಜನಗರ: ಜಿಲ್ಲೆಯ ಹನೂರು (Hanuru) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hill) ಯುಗಾದಿ ಜಾತ್ರೆ ಹಿನ್ನಲೆಯಲ್ಲಿ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ.
ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಮಾ. 29ರಿಂದ ಮಾ. 31ರವರೆಗೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಭೂಕಂಪ – 144ಕ್ಕೇರಿದ ಸಾವಿನ ಸಂಖ್ಯೆ; ತುರ್ತು ಪರಿಸ್ಥಿತಿ ಘೋಷಣೆ
- Advertisement -
- Advertisement -
ಹನೂರು ತಾಲೂಕಿನ ಕೌದಳ್ಳಿ (Cowdalli) ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಅಮಾವಾಸ್ಯೆ ಪೂಜೆ ಹಾಗೂ ಭಾನುವಾರ ಯುಗಾದಿ ರಥೋತ್ಸವ ಹಿನ್ನಲೆ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಧೋನಿಗೆ ಏಜ್ ಆಗಿದೆ ಅಂದವರ್ಯಾರು? – ಮತ್ತೆ ರಾಕೆಟ್ ಸ್ಪೀಡ್‌ನಲ್ಲಿ ಸ್ಟಂಪ್, ಸಾಲ್ಟ್ ಸ್ಟನ್!