ಚೆನ್ನೈ ವಿರುದ್ಧ ಗೆದ್ದ ಆರ್‌ಸಿಬಿಗೆ ವಿಜಯ್‌ ಮಲ್ಯಾ ವಿಶ್‌

Public TV
1 Min Read
vijay mallay RCB

ಚೆನ್ನೈ: ಚೆಪಾಕ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಉದ್ಯಮಿ ವಿಜಯ್‌ ಮಲ್ಯಾ ಅಭಿನಂದನೆ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಮಲ್ಯಾ, 18 ವರ್ಷಗಳ ನಂತರ ಚೆಪಾಕ್ ಕೋಟೆಯಲ್ಲಿ ದಕ್ಷಿಣದ ಎದುರಾಳಿ ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಆರ್‌ಸಿಬಿಗೆ ಅಭಿನಂದನೆಗಳು. ಬ್ಯಾಟಿಂಗ್ ಮತ್ತು ಬೌಲ್‌ನಲ್ಲಿ ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನ. ಧೈರ್ಯಶಾಲಿ ಹುಡುಗರೇ, ಇನ್ನೂ ಚೆನ್ನಾಗಿ ಆಟವಾಡಿ ಎಂದು ಶುಭಾಶಯ ತಿಳಿಸಿದ್ದಾರೆ.

ಐಪಿಎಲ್‌ 2025ರ ಮೊದಲ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಆರ್‌ಸಿಬಿ ಜಯಗಳಿಸಿದಾಗಲೂ ವಿಜಯ್‌ ಮಲ್ಯಾ ಅಭಿನಂದನೆ ತಿಳಿಸಿದ್ದರು.

ಐಪಿಎಲ್‌ನ ಹೈವೋಲ್ಟೇಜ್‌ ಪಂದ್ಯದಲ್ಲಿ ಕೊನೆಗೂ 17 ವರ್ಷಗಳ ಬಳಿಕ ಚೆನ್ನೈ ನೆಲದಲ್ಲಿ ಆರ್‌ಸಿಬಿ ಗೆದ್ದು ಬೀಗಿದೆ. ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್‌ನಲ್ಲಿ ಸತತ 2ನೇ ಗೆಲುವು ದಾಖಲಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 196 ರನ್‌ ಗಳಿಸಿತು. 197 ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಚೆನ್ನೈ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 146 ರನ್ನಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.

Share This Article