ರಾಜ್ಯದ ಜನರಿಗೆ ಮತ್ತೆ ಶಾಕ್‌ – ಟ್ರಾನ್ಸ್‌ಫಾರ್ಮರ್‌, ಜನರೇಟರ್ ಪರಿಶೀಲನೆ & ರಿನೀವಲ್ ಶುಲ್ಕ 3 ಪಟ್ಟು ಏರಿಕೆ!

Public TV
2 Min Read
01 NEWS

ಬೆಂಗಳೂರು: ಈಗಾಗಲೇ ಬೇಸಿಗೆಯ ಬಿಸಲು ಜನರ ತಲೆ ಸುಡುತ್ತಿದ್ದರೆ, ರಾಜ್ಯ ಸರ್ಕಾರದ ಬೆಲೆ ಏರಿಕೆ ನಿರ್ಧಾರ ಜನರ ಜೇಬು ಸುಡುತ್ತಿದೆ. ಗ್ಯಾರಂಟಿಗಳ (Guarantee) ಭಾರದಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಒಂದೆಡೆ ಉಚಿತಗಳನ್ನು ಕೊಟ್ಟು ಮತ್ತೊಂದುಕಡೆಯಿಂದ ಜನರಿಂದ ಕಿತ್ತುಕೊಳ್ಳುತ್ತಿದೆ. ಬಸ್, ಮೆಟ್ರೋ ಬಳಿಕ ಹಾಲು, ಮೊಸರು, ವಿದ್ಯುತ್‌ ದರ ಏರಿಕೆ ಬಳಿಕ ಇದೀಗ ಲಿಫ್ಟ್, ಟ್ರಾನ್ಸ್‌ಫಾರ್ಮರ್‌ (KVA Transformers), ಜನರೇಟರ್ ಪರಿಶೀಲನೆ ಮತ್ತು ರಿನೀವಲ್ ಶುಲ್ಕ ಏರಿಕೆ ಮಾಡಿದೆ.

ರಾಜ್ಯ ಇಂಧನ ಇಲಾಖೆ ಲಿಫ್ಟ್, ಟ್ರಾನ್ಸ್‌ಫಾರ್ಮರ್‌, ಜನರೇಟರ್ (Generators) ಪರಿಶೀಲನೆ ಮತ್ತು ರಿನೀವಲ್ ಶುಲ್ಕ ಏಕಾಏಕಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹಿಂದೆ ಇದ್ದ ದರಕ್ಕಿಂತ ಮೂರು ಪಟ್ಟು ಶುಲ್ಕ ಹೆಚ್ಚಳ ಮಾಡಿದೆ. 800 ರೂ. ನಿಂದ 1,000 ರೂ.ನಷ್ಟಿದ್ದ ಶುಲ್ಕದ ಮೊತ್ತವನ್ನ ಏಕಾಏಕಿ 5,000 ರೂ. ನಿಂದ 8,000 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಇದನ್ನೂ ಓದಿ: ಯತ್ನಾಳ್ ಪೇಪರ್ ಹುಲಿ, ಯಡಿಯೂರಪ್ಪ ಕಾಲಿನ ಧೂಳಿಗೂ ಸಮವಲ್ಲ: ಎ.ಎಸ್.ಪಾಟೀಲ್

KVA Transformer

ಮನೆ, ಕಚೇರಿ, ಫ್ಯಾಕ್ಟರಿಗಳಿಗೆ 25 ಕೆವಿಎ ಟ್ರಾನ್ಸ್‌ಫಾರ್ಮರ್‌ ಹಾಕಿಸಿಕೊಂಡಿದ್ದರೆ ಅದನ್ನ ಪರಿಶೀಲನೆ ಮಾಡಲು 1,300 ರೂ.ನಿಂದ 1,500 ರೂ. ಶುಲ್ಕ ಪಡೆದುಕೊಳ್ಳಲಾಗುತ್ತಿತ್ತು. ಆದ್ರೆ ಈಗ ಆ ದರವನ್ನು 3 ರಿಂದ 5 ಸಾವಿರ ರೂ.ಗೆ ಏರಿಕೆ. ಮಾಡಲಾಗಿದೆ. 5 ರಿಂದ 10 ಕೆವಿಎ ಸಣ್ಣ ಜನರೇಟರ್ ಪರಿಶೀಲನೆ ಮತ್ತು ರಿನೀವಲ್‌ಗೆ 2 ಸಾವಿರ ರೂ. ಇದ್ದ ಶುಲ್ಕವನ್ನು ಇದೀಗ 5 ರಿಂದ 8 ಸಾವಿರ ರೂ. ವರೆಗೆ ಏರಿಕೆ ಮಾಡಲಾಗಿದೆ. ರೈತರ ಐಪಿ ಸೆಟ್-25 ಕೆವಿ ವ್ಯಾಟ್‌ಗೆ 3 ಸಾವಿರ ಇದ್ದ ಶುಲ್ಕವನ್ನ ಏಕಾಏಕಿ 11,800 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಇದನ್ನೂ ಓದಿ: ಸೆಟ್ಟೇರಿತು ಚಿರಂಜೀವಿ 157ನೇ ಸಿನಿಮಾ- ಕ್ಲಾಪ್ ಮಾಡಿ ಶುಭ ಹಾರೈಸಿದ ವಿಕ್ಟರಿ ವೆಂಕಟೇಶ್

ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎನ್ನುವಂತೆ ಅಧಿಕಾರ ಹಿಡಿಯುವುದಕ್ಕೆ ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದ ಸರ್ಕಾರ ಇದೀಗ ಒಂದೊಂದಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನರಿಂದ ತೆರಿಗೆ ವಸೂಲಿಗೆ ಪ್ಲ್ಯಾನ್‌ ಮಾಡಿದಂತಿದೆ. ಇದನ್ನೂ ಓದಿ: ನಾಳೆಯಿಂದ ದುನಿಯಾ ದುಬಾರಿ – ಹಾಲು, ಮೊಸರು ದುಬಾರಿ.. ಕಸಕ್ಕೂ ಕಾಸು, ಯಾವುದಕ್ಕೆ ಎಷ್ಟು ದರ ಹೆಚ್ಚಳ?

Share This Article