Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತಿಮ ಘಟ್ಟ ತಲುಪಿಕೊಂಡ ಸುಚೇಂದ್ರ ಪ್ರಸಾದ್ ನಿರ್ದೇಶನ ‘ಪದ್ಮಗಂಧಿ’!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಂತಿಮ ಘಟ್ಟ ತಲುಪಿಕೊಂಡ ಸುಚೇಂದ್ರ ಪ್ರಸಾದ್ ನಿರ್ದೇಶನ ‘ಪದ್ಮಗಂಧಿ’!

Cinema

ಅಂತಿಮ ಘಟ್ಟ ತಲುಪಿಕೊಂಡ ಸುಚೇಂದ್ರ ಪ್ರಸಾದ್ ನಿರ್ದೇಶನ ‘ಪದ್ಮಗಂಧಿ’!

Public TV
Last updated: March 31, 2025 4:21 pm
Public TV
Share
3 Min Read
suchendra prasad
SHARE

ಒಂದು ಹೊಸ ಸಿನಿಮಾ ರೂಪುಗೊಳ್ಳುತ್ತಿದೆ ಎಂಬ ಸುಳಿವು ಸಿಕ್ಕಾಕ್ಷಣವೇ ಅದರಲ್ಲಿ ಅಡಕವಾಗಿರಬಹುದಾದ ಕಥೆಯ ಬಗ್ಗೆ ಕುತೂಹಲವೊಂದು ಹರಳುಗಟ್ಟಲಾರಂಭಿಸುತ್ತೆ. ಸಾಮಾನ್ಯವಾಗಿ, ಇಂಥಾ ಕಲ್ಪನೆಗಳೆಲ್ಲವೂ ಮಾಮೂಲು ಶೈಲಿಯ ಬಿಂದುವಿನಲ್ಲಿಯೇ ಗಿರಕಿ ಹೊಡೆಯುತ್ತವೆ. ಆದರೆ, ನಮ್ಮೆಲ್ಲರ ಪಾಲಿಗೆ ಚಿರಪರಿಚಿತವಾಗಿರುವ, ದೈವೀಕ ಗಂಧ ಮೆತ್ತಿಕೊಂಡಿರುವ ಕಮಲದ ಹೂವಿನ ಬಗ್ಗೆಯೇ ಒಂದು ಸಿನಿಮಾ ರೂಪುಗೊಳ್ಳುತ್ತದೆ ಎಂದರೆ ಸಹಜವಾಗಿಯೇ ಅಚ್ಚರಿ ಮೂಡಿಕೊಳ್ಳುತ್ತೆ. ಅಂಥಾದ್ದೊಂದು ಕುತೂಹಲ ತಾನೇತಾನಾಗಿ ಮೂಡಿಕೊಂಡಿರುವುದು ‘ಪದ್ಮಗಂಧಿ’ (Padmagandhi Film) ಎಂಬ ಸಿನಿಮಾದ ಬಗ್ಗೆ.

suchendra prasad 4

ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ರೂಪುಗೊಳ್ಳುತ್ತಿರುವ ಈ ಚಿತ್ರವನ್ನು ಸುಚೇಂದ್ರ ಪ್ರಸಾದ್ (Suchendra Prasad) ನಿರ್ದೇಶನ ಮಾಡುತ್ತಿದ್ದಾರೆ. ಮಾಜಿ ಎಂಎಲ್‌ಸಿ, ಪ್ರಸಿದ್ಧ ಅಂಕಣಕಾರ್ತಿ, ಸಂಸ್ಕೃತದ ಭೂಮಿಕೆಯಲ್ಲಿ ನಾನಾ ದಿಕ್ಕಿನ ಅಧ್ಯಯನ, ಪಾಂಡಿತ್ಯದ ಮೂಲಕ ಹೆಸರಾಗಿರುವ ಎಸ್.ಆರ್ ಲೀಲಾ ಈ ಚಿತ್ರಕ್ಕೆ ಕಥೆ ಸಿದ್ಧಪಡಿಸುವುದರ ಜೊತೆಗೆ ನಿರ್ಮಾಪಕಿಯಾಗಿಯೂ ಜೊತೆಯಾಗಿದ್ದಾರೆ. ನಮ್ಮಲ್ಲಿ ದೈವೀಕ ಅನುಭೂತಿ ಸ್ಫುರಿಸುವ ಕಮಲ ಪುಷ್ಪದ ಬಗ್ಗೆ ಆಳವಾಗಿ ಅರಿವಿನ ಪರಿಧಿಯನ್ನು ವಿಸ್ತರಿಸಿಕೊಳ್ಳುತ್ತಾ ಸಾಗಿದ್ದ ಲೀಲಾ ಅವರ ಪಾಲಿಗೆ, ಅದರ ಅಗಾಧತೆ ಮೊಗೆದರೂ ಮುಗಿಯದ ಅಕ್ಷಯ ಪಾತ್ರೆಯಂತೆ ಭಾಸವಾಗಲಾರಂಭಿಸಿತ್ತು. ಕಡೆಗೂ ಕಮಲ ಪುಷ್ಪದ ಬಗ್ಗೆ ನಿರಂತರವಾಗಿ ಆರೇಳು ವರ್ಷ ಅಧ್ಯಯನ ನಡೆಸಿದ್ದ ಅವರು ಕಡೆಗೂ ಅಪರೂಪದ ಕಥೆಯೊಂದನ್ನು ಸಿದ್ಧಪಡಿಸಿ, ನಂತರ ಸುಚೇಂದ್ರ ಪ್ರಸಾದ್ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದರು. ಇದನ್ನೂ ಓದಿ:ಕೊನೆಗೂ ಭಾವಿ ಪತಿಯ ಫೋಟೋ ಹಂಚಿಕೊಂಡ ‘ಹುಡುಗರು’ ಚಿತ್ರದ ನಟಿ ಅಭಿನಯ

suchendra prasad 2

ಸಸ್ಯ ಶಾಸ್ತ್ರದ ಪ್ರಕಾರ ಏಷ್ಯಾ ಖಂಡದ ದೇಸೀ ಹೂವಾದ ಕಮಲ, ಪುರಾಣ ಕಾಲದಿಂದಲೂ ಶ್ರೇಷ್ಠ ಪುಷ್ಪವಾಗಿ ಘನತೆ ಪಡೆದುಕೊಂಡಿದೆ. ಪ್ರಾಚೀನ ಕಾಲದಿಂದ ಆರಂಭವಾಗಿ ಅರ್ವಾಚೀನ ಕಾಲದವರೆಗೂ ಅದೇ ಪ್ರಭೆಯನ್ನು ಉಳಿಸಿಕೊಂಡಿರುವ ಕಮಲ ವಿಶಾಲವಾದ ಹರವುಳ್ಳ ಅಪರೂಪದ ಪುಷ್ಪ. ಕೆದಕುತ್ತಾ ಹೋದರೆ ಈಜಿಪ್ಟ್ ನಾಗರೀಕತೆಯವರೆಗೂ ಕೂಡ ಇದರ ಪ್ರಭಾವಳಿ ಹಬ್ಬಿಕೊಂಡಿರುವ ಅಚ್ಚರಿಯೊಂದು ಎದುರಾಗುತ್ತೆ. ಸಾವಿರಾರು ವರ್ಷದ ಹಿಂದಿನ ಬೀಜವನ್ನು ಇಂದು ಬಿತ್ತಿದರೂ ಸಲೀಸಾಗಿ ಚಿಗುರೊಡೆದು, ಗಿಡವಾಗಿ, ಹೂವಾಗಿ ನಗುವ ಶಕ್ತಿ ಈ ಜಗತ್ತಿನಲ್ಲಿ ಯಾವುದಾದರೂ ಪುಷ್ಪಕ್ಕಿದೆ ಎಂದರೆ ಅದು ಕಮಲಕ್ಕೆ ಮಾತ್ರ. ಸಮರ ಕಲೆಗಳಲ್ಲಿಯೂ ಈ ಹೂವಿನ ಐತಿಹ್ಯವಿದೆ. ಮಹಾಭಾರತದಲ್ಲಿ ಘಟಿಸುವ ಯುದ್ಧದಲ್ಲಿ ನಾನಾ ವ್ಯೂಹಗಳು ರಚನೆಯಾದದ್ದು ಗೊತ್ತೇ ಇದೆ. ಚಕ್ರವ್ಯೂಹ, ಗರುಡ ವ್ಯೂಹದಂಥವುಗಳು ನಮ್ಮೆಲ್ಲರಿಗೆ ಪರಿಚಿತ. ವಿಶೇಷವೆಂದರೆ, ಅದರಲ್ಲಿ ಪದ್ಮವ್ಯೂಹವೂ ಸೇರಿಕೊಂಡಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಲಂಚ್ ಡೇಟ್- ಮತ್ತೆ ಡೇಟಿಂಗ್‌ ಬಗ್ಗೆ ಶುರುವಾಯ್ತು ಚರ್ಚೆ

suchendra prasad 1ಪ್ರಾಧ್ಯಾಪಕಿಯಾಗಿ, ಲೇಖಕಿಯಾಗಿ, ಸಂಶೋಧಕಿಯಾಗಿ ಸದಾ ಹೊಸ ಅರಿವು ಸೃಷ್ಟಿಯತ್ತ ತುಡಿಯುವ ಮನಃಸ್ಥಿತಿ ಹೊಂದಿರುವ ಎಸ್.ಆರ್ ಲೀಲಾ ಸಿನಿಮಾ ರಂಗಕ್ಕೇನು ಅಪರಿಚಿತರಲ್ಲ. ಅಂಥಾ ಅಗಾಧ ತಿಳಿವಳಿಕೆ, ಭಿನ್ನ ಗ್ರಹಿಕೆಗಳ ಭೂಮಿಕೆಯಲ್ಲಿಯೇ ಅವರು ಪದ್ಮಗಂಧಿಯ ಕಥನವನನು ಕಟ್ಟಿಕೊಟ್ಟಿದ್ದಾರೆ. ಸುಚೇಂದ್ರ ಪ್ರಸಾದ್ ರ ಸಮರ್ಥ ಸಾರಥ್ಯದಲ್ಲಿ, ಪ್ರತಿಭಾನ್ವಿತರ ತಂಡದ ಮೂಲಕ ಪದ್ಮಗಂಧಿ ಅಂತಿಮ ಘಟ್ಟ ತಲುಪಿಕೊಂಡಿದೆ. ಮಿಕ್ಕುಳಿದ ಒಂದಷ್ಟು ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಪದ್ಮಗಂಧಿಯ ಬಗ್ಗೆ ಮತ್ತೊಂದಷ್ಟು ಕೌತುಕದ ವಿಚಾರಗಳನ್ನು ಚಿತ್ರತಂಡ ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಇದೇ ಮೇ ತಿಂಗಳ ನಂತರ ಕನ್ನಡ, ಸಂಸ್ಕೃತ ಮತ್ತು ಹಿಂದಿ ಭಾಷೆಗಳಲ್ಲಿ ತಯಾರಾಗಿರುವ ಪದ್ಮಗಂಧಿ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.

suchendra prasad 3

ಅಂದಹಾಗೆ, ಈ ಸಿನಿಮಾ ಮಕ್ಕಳ ಚಿತ್ರದ ಆವರಣದಲ್ಲಿ ಅಣಿಗೊಳ್ಳುತ್ತಿದೆ. ಗುರುಕುಲದ ಹಿನ್ನೆಲೆಯಿಂದ ಗರಿಬಿಚ್ಚಿಕೊಳ್ಳುವ ಪದ್ಮಗಂಧಿ ಸಿನಿಮಾ ಎಸ್.ಆರ್ ಲೀಲಾ ಅವರ ಕನಸಿನ ಕೂಸು. ಸಂಭಾಷಣೆ ಹಾಗೂ ನಿರ್ದೇಶನ ಸುಚೇಂದ್ರ ಪ್ರಸಾದ್‌, ಡಾ. ದೀಪಕ್ ಪರಮಶಿವನ್ ಸಂಗೀತ, ಎನ್. ನಾಗೇಶ್ ನಾರಾಯಣಪ್ಪ ಸಂಕಲನ, ಮನು ಯಾಪ್ಲಾರ್ ಮತ್ತು ನಾಗರಾಜ್ ಅದ್ವಾನಿ ಛಾಯಾಗ್ರಹಣವಿರುವ ಈ ಚಿತ್ರ ಮಹಾಪದ್ಮ, ಮೃತ್ಯುಂಜಯ ಶಾಸ್ತ್ರಿ , ಪಂಡಿತ ಪ್ರಸನ್ನ ವೈದ್ಯ, ಡಾ. ದೀಪಕ್ ಪರಮಶಿವನ್, ಹೇಮಂತ ಕುಮಾರ ಜಿ, ಪರಿಪೂರ್ಣ, ಮುಂತಾದವರ ತಾರಾಗಣದೊಂದಿಗೆ ಕಳೆಗಟ್ಟಿಕೊಂಡಿದೆ.

TAGGED:padma gandiSuchendra Prasadಪದ್ಮಗಂಧಿ ಸಿನಿಮಾಸುಚೇಂದ್ರ ಪ್ರಸಾದ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
7 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
28 minutes ago
Janivar Protest
Bengaluru City

ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ – ಪ್ರತ್ಯೇಕ ಕಾನೂನು ರೂಪಿಸುವಂತೆ ಬ್ರಾಹ್ಮಣ ಮಹಾಸಭಾ ಆಗ್ರಹ

Public TV
By Public TV
29 minutes ago
UT Khader 2
Bengaluru City

ಶಾಸಕರ ಸದಸ್ಯತ್ವ ರದ್ದು ಮಾಡೋ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ.ಖಾದರ್

Public TV
By Public TV
31 minutes ago
Hassan Accident
Crime

ನಾಲೆಗೆ ಬಿದ್ದ ಕಾರು – ತಾಯಿ, ಮಗು ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Public TV
By Public TV
38 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?