ನವದೆಹಲಿ: ಇಲ್ಲಿನ ಝಂಡೇವಾಲನ್ (Jhandewalan) ಪ್ರದೇಶದ ಅನಾರ್ಕಲಿ ಕಟ್ಟಡ ಹಾಗೂ ಡಿಡಿಎ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ (DDA Shopping Complex) ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಘಟನಾ ಸ್ಥಳಕ್ಕೆ 15 ಅಗ್ನಿಶಾಮಕ ದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬ್ಲಾಕ್ ಇ 3ರಲ್ಲಿರುವ ಅನಾರ್ಕಲಿ ಕಾಂಪ್ಲೆಕ್ಸ್‌ನಲ್ಲಿ ಮಧ್ಯಾಹ್ನ 2:35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಖಂಡಿಸಿ ಶೀಘ್ರವೇ ಜೆಡಿಎಸ್‌ನಿಂದ ಹೋರಾಟ – ನಿಖಿಲ್
Fire Breaks Out in Jhandewalan, New Delhi! A building in Jhandewalan caught fire—emergency services on the scene pic.twitter.com/ajzuv61lUk
— prashant sharma (@prashan86388870) April 1, 2025
ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸ್ಥಳದಲ್ಲಿ ನಿಲ್ಲಿಸಿದ್ದ ಹಲವಾರು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಹತ್ತಿರದ ಬ್ಯಾಂಕ್‌ಗೂ ಹರಡಿದೆ. ಸದ್ಯ ಬೆಂಕಿ ಅವಘಡದಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಇದನ್ನೂ ಓದಿ: ಹನಿಟ್ರ‍್ಯಾಪ್ ಕೇಸ್‌ನ ಟೀಸರ್‌ನಲ್ಲಿ ಒಂದು, ಸಿನಿಮಾದಲ್ಲಿ ಮತ್ತೊಂದನ್ನು ತೋರಿಸೋ ಕೆಲಸ ಆಗ್ತಿದೆ – ನಿಖಿಲ್ ಕುಮಾರಸ್ವಾಮಿ
ದೆಹಲಿಯಲ್ಲಿ ಒಂದು ದಿನದಲ್ಲಿ ಸಂಭವಿಸಿದ ಎರಡನೇ ಬೆಂಕಿ ಅವಘಡ ಇದಾಗಿದೆ. ಮಂಗಳವಾರ ಬೆಳಗ್ಗೆ 7:35ಕ್ಕೆ ನ್ಯೂ ಸೀಲಾಂಪುರ್‌ನ ಕೊಳಚೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಗೆ ಅಸಲಿ ಕಾರಣವೇನು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೂ ಔರಂಗಜೇಬ್‌ಗೂ ಯಾವುದೇ ವ್ಯತ್ಯಾಸ ಇಲ್ಲ: ಹರೀಶ್ ಪೂಂಜಾ