‘ಫಣಿ’ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿದ ತೆಲುಗು ನಿರ್ದೇಶಕ ಕೆ.ರಾಘವೇಂದ್ರ ರಾವ್

Public TV
1 Min Read
phani film 1

ತೆಲುಗಿನಲ್ಲಿ ಬಾಸ್, ಶ್ರೀರಾಮ್, ನೇನುನ್ನಾನು, ಆಟ ಸೇರಿದಂತೆ ಹಲವು ಹಿಟ್ ಚಿತ್ರ ನಿರ್ದೇಶಿಸಿರುವ ಪ್ರತಿಭಾನ್ವಿತ ನಿರ್ದೇಶಕ ಡಾ. ವಿ.ಎನ್. ಆದಿತ್ಯ ಈಗ ‘ಫಣಿ’ (Phani) ಚಿತ್ರ ನಿರ್ದೇಶನ ಮಾಡಲು ರೆಡಿಯಾಗಿದ್ದಾರೆ. ಇದೀಗ ಫಣಿ ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡಿ ಖ್ಯಾತ ನಿರ್ದೇಶಕ ಕೆ.ರಾಘವೇಂದ್ರ ರಾವ್‌ ಚಿತ್ರತಂಡಕ್ಕೆ ಶುಭಕೋರಿದ್ದಾರೆ.ಇದನ್ನೂ ಓದಿ:‘ಡೆವಿಲ್‌’ ಶೂಟಿಂಗ್‌ಗಾಗಿ ರಾಜಸ್ಥಾನದಲ್ಲಿ ಪತಿ ಜೊತೆ ವಿಜಯಲಕ್ಷ್ಮಿ

phani film 3

ನಟಿ ಕ್ಯಾಥರೀನ್ ಟ್ರೆಸಾ ‘ಫಣಿ’ ಸಿನಿಮಾದಲ್ಲಿ ಪ್ರಮುಖ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಮಹೇಶ್ ಶ್ರೀರಾಮ್ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ಹಿಂದಿ ಜೊತೆಗೆ, ಫಣಿ ಚಿತ್ರ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಇತರ ಜಾಗತಿಕ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಕೆ. ರಾಘವೇಂದ್ರ ರಾವ್ ಹೈದರಾಬಾದ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಫಣಿ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:‘ಸ್ತ್ರೀ 2’ ಸಕ್ಸಸ್ ಬಳಿಕ ಶ್ರದ್ಧಾ ಕಪೂರ್‌ಗೆ ಒಲಿದ ಅದೃಷ್ಟ- ನಟಿಗೆ ಬಿಗ್ ಚಾನ್ಸ್

phani film 2

ಈ ಕಾರ್ಯಕ್ರಮದಲ್ಲಿ ಕೆ. ರಾಘವೇಂದ್ರ ರಾವ್ ಮಾತನಾಡಿದ, ಆದಿತ್ಯ ನನ್ನೊಂದಿಗೆ ಕೆಲಸ ಮಾಡದಿದ್ದರೂ, ಅವರು ನನ್ನ ನೆಚ್ಚಿನವರಲ್ಲಿ ಒಬ್ಬರು. ಅವರು ಹೊಸ ತಾರೆಯರೊಂದಿಗೆ ಸಿನಿಮಾ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರ ಸಹೋದರಿ ಮೀನಾಕ್ಷಿ ಫಣಿ ನಿರ್ಮಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ‘ಸರೈನೋಡು’ ಚಿತ್ರದಲ್ಲಿ ಕ್ಯಾಥರೀನ್ ನಟಿಸಿದ್ದರು. ಈ ಚಿತ್ರದಲ್ಲಿ ಅವರು ಯಾವ ರೀತಿಯ ಪಾತ್ರವನ್ನು ನಿರ್ವಹಿಸುತ್ತಾರೆ ಎಂದು ನೋಡಲು ನಾನು ಉತ್ಸುಕನಾಗಿದ್ದೇನೆ. ‘ಫಣಿ’ಯ ಇಡೀ ತಂಡಕ್ಕೆ ನಾನು ಶುಭಹಾರೈಸುತ್ತೇನೆ ಮತ್ತು ಚಿತ್ರವು ಉತ್ತಮ ಯಶಸ್ಸನ್ನು ಸಾಧಿಸಲಿ ಎಂದು ಶುಭಹಾರೈಸಿದ್ದಾರೆ.

phani film

ಡಾ.ವಿ.ಎನ್ ಆದಿತ್ಯ ಕಥೆ ಚಿತ್ರಕಥೆ ಬರೆದು ‘ಫಣಿ’ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾ. ಮೀನಾಕ್ಷಿ ಅನಿಪಿಂಡಿ ನಿರ್ಮಾಣದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಜನೈದ್‌ ಸಂಕಲನ, ಬುಜ್ಜಿ.ಕೆ, ಸಾಯಿಕಿರಣ್ ಐನಂಪುಡಿ ಛಾಯಾಗ್ರಹಣ, ಜಾನ್‌ ಖಾನ್‌ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ.

Share This Article