25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ

Public TV
2 Min Read
Mamata Banerjee

ಕೋಲ್ಕತ್ತಾ: ಶಿಕ್ಷಕರ (Teachers) ಅಕ್ರಮ ನೇಮಕಾತಿ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪ್ರತಿಕ್ರಿಯಿಸಿದ್ದು, ಸುಪ್ರೀಂ ಕೋರ್ಟ್ (Supreme Court) ತೀರ್ಪನ್ನು ವೈಯಕ್ತಿಕವಾಗಿ ಸ್ವೀಕರಿಸುವುದಿಲ್ಲ ಎಂದಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನ್ನು ಸರ್ಕಾರ ಜಾರಿಗೆ ತಂದು ಆಯ್ಕೆ ಪ್ರಕ್ರಿಯೆಯನ್ನು ಪುನರಾವರ್ತಿಸುತ್ತದೆ. ವಿರೋಧ ಪಕ್ಷ ಬಿಜೆಪಿ ಮತ್ತು ಸಿಪಿಎಂ ಬಂಗಾಳದ ಶಿಕ್ಷಣ ವ್ಯವಸ್ಥೆ ಕುಸಿಯಬೇಕೆಂದು ಬಯಸುತ್ತವೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 25 ಸಾವಿರ ಶಿಕ್ಷಕರನ್ನು ವಜಾಗೊಳಿಸಿದ ಸುಪ್ರೀಂ – ದೀದಿ ಸರ್ಕಾರಕ್ಕೆ ಮುಖಭಂಗ

TEACHERS DAY AWARD 2

ನಾನು ಈ ದೇಶದ ನಾಗರಿಕಳಾಗಿ ನನಗೆ ಎಲ್ಲಾ ಹಕ್ಕಿದೆ. ನಾನು ಮಾನವೀಯ ದೃಷ್ಟಿಕೋನದಿಂದ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದೇನೆ. ನ್ಯಾಯಮೂರ್ತಿಗಳ ಮೇಲೆ ಅಪಾರ ಗೌರವವಿದೆ. ಆದರೆ, ನಾನು ಈ ತೀರ್ಪನ್ನು ಒಪ್ಪುತ್ತಿಲ್ಲ ಎಂದು ಹೇಳಲು ಬಯಸುತ್ತೇನೆ. ಅನಗತ್ಯ ತಪ್ಪು ಮಾಹಿತಿ ನೀಡಬೇಡಿ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ತೀರ್ಪು ಕೇವಲ ಅಭ್ಯರ್ಥಿಗಳು ಮಾತ್ರ ಅಲ್ಲ, ಅವರ ಕುಟುಂಬದ ಮೇಲೂ ಪರಿಣಾಮ ಬೀರಿದೆ. ಇನ್ನೂ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದನ್ನು ಉಲ್ಲೇಖಿಸಿ, ನ್ಯಾಯಾಧೀಶರ ಮನೆಯಲ್ಲಿ ಹಣ ಪತ್ತೆಯಾದರೆ ಅವರನ್ನು ವರ್ಗಾಯಿಸಲಾಗುತ್ತದೆ. ಹಾಗಾದರೆ ಈ ಶಿಕ್ಷಕರನ್ನು ಏಕೆ ವರ್ಗಾಯಿಸಲಾಗಿಲ್ಲ? ಈ ಆದೇಶವನ್ನು ನೀಡಿದ ಮೊದಲ ನ್ಯಾಯಾಧೀಶರು ಈಗ ಬಿಜೆಪಿ ಸಂಸದರಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಅಡಿಯಲ್ಲಿ 25,000 ಕ್ಕೂ ಹೆಚ್ಚು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಯನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಏ.3) ಎತ್ತಿಹಿಡಿದಿದೆ. ಸಂಪೂರ್ಣ ಆಯ್ಕೆ ಪ್ರಕ್ರಿಯೆಯು ವಂಚನೆಯಿಂದ ಕೂಡಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ವೇಳೆ ಕಳವಳ ವ್ಯಕ್ತಪಡಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್ ಅವರ ಪೀಠವು ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಕಾರಣವಿಲ್ಲ. ನ್ಯಾಯಯುತ ವಿಧಾನಗಳ ಮೂಲಕ ನೇಮಕಗೊಂಡವರು ಸಹ ಕಳಂಕಿತ ಅಭ್ಯರ್ಥಿಗಳಂತೆ ತೊಂದರೆ ಅನುಭವಿಸಿದ್ದಾರೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: West Bengal: 2016ರ ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್‌ ಆದೇಶ

Share This Article