ಎನ್‌ಡಿಎ ಅವಧಿಯಲ್ಲೇ ತಮಿಳುನಾಡಿಗೆ 3 ಪಟ್ಟು ಹೆಚ್ಚಿನ ಅನುದಾನ ಸಿಕ್ಕಿದೆ – ಮೋದಿ

Public TV
3 Min Read
Modi 1

– ತಮಿಳುನಾಡಿನ ಮೂಲಸೌಕರ್ಯ ಕೇಂದ್ರದ ಪ್ರಮುಖ ಆದ್ಯತೆ
– ರಾಜ್ಯದಾದ್ಯಂತ 77 ರೈಲು ನಿಲ್ದಾಣ ಆಧುನೀಕರಿಸಲು ಒತ್ತು

ಚೆನ್ನೈ: 2014ರ ನಂತರ ಎನ್‌ಡಿಎ ಸರ್ಕಾರದ ಅವಧಿಯಲ್ಲಿ ತಮಿಳುನಾಡಿಗೆ (Tamil Nadu) ಮೂರು ಪಟ್ಟು ಹೆಚ್ಚಿನ ಅನುದಾನ ಸಿಕ್ಕಿದೆ. ಆದರೂ ಕೆಲವರು ಸಮರ್ಥನೆಯಿಲ್ಲದೇ ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ ಎಂದು ಡಿಎಂಕೆ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಕಿಡಿ ಕಾರಿದರು.

ತಮಿಳುನಾಡಿನ ರಾಮೇಶ್ವರಂನಲ್ಲಿ ʻಪಂಬನ್ʼ ದೇಶದ ಮೊದಲ ವರ್ಟಿಕಲ್‌ ರೈಲ್ವೆ ಬ್ರಿಡ್ಜ್‌ ಲೋಕಾರ್ಪಣೆಗೊಳಿಸಿದ್ರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ರಾಜ್ಯದ ಇತರೇ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ರು. ಈ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಾ, ಎಂ.ಕೆ ಸ್ಟಾಲಿನ್‌ (MK Stalin) ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 2014ರಿಂದ ತಮಿಳುನಾಡಿಗೆ ಕೇಂದ್ರದ ಅನುದಾನ 3 ಪಟ್ಟು ಹೆಚ್ಚಾಗಿ ಸಿಕ್ಕಿದೆ. ಆದರೂ ಕೆಲವರಿಗೆ ಯಾವಾಗಲೂ ಅಳುವ ಅಭ್ಯಾಸ ಇರುತ್ತದೆ ಎಂದು ಕುಟುಕಿದರು. ಇದನ್ನೂ ಓದಿ: PublicTV Explainer: ‘ಕೆಜಿಎಫ್‌’ಗೆ ಕಂಟಕ – ಸರ್ಕಾರ V/S ವಿದ್ಯಾರ್ಥಿಗಳು; ಏನಿದು ವಿವಾದ?

ತಮಿಳುನಾಡಿನ ಮೂಲಸೌಕರ್ಯವು (Infrastructure of Tamil Nadu )ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಕಳೆದ ದಶಕಗಳಲ್ಲಿ ರಾಜ್ಯದ ರೈಲ್ವೆ ಬಜೆಟ್‌ 7 ಪಟ್ಟು ಹೆಚ್ಚಾಗಿದೆ. ಇಂತಹ ಗಮನಾರ್ಹ ಬೆಳವಣಿಗೆ ಆಗಿದ್ದರೂ ಕೆಲವರು ಸಮರ್ಥನೆಗಳಿಲ್ಲದೇ ದೂರುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದರು. ಇದನ್ನೂ ಓದಿ: ಸಮುದ್ರದಲ್ಲಿ ಪಾಕ್‌ ವ್ಯಕ್ತಿಗೆ ಎದುರಾದ ಸಂಕಷ್ಟ – 3 ಗಂಟೆ ಕಾಲ ಶಸ್ತ್ರಚಿಕಿತ್ಸೆ ನೀಡಿ ಜೀವ ಉಳಿಸಿದ ಭಾರತೀಯ ನೌಕಾಪಡೆ ಸಿಬ್ಬಂದಿ

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತದ ಪ್ರಯಾಣದಲ್ಲಿ ತಮಿಳುನಾಡು ನಿರ್ಣಾಯಕ ಸ್ಥಾನವನ್ನು ಹೊಂದಿದೆ. ರಾಜ್ಯವು ಸಂಪೂರ್ಣ ಸಾಮರ್ಥ್ಯವನ್ನು ಸಾಬೀತುಪಡಿಸಿದಂತೆ ದೇಶದ ಒಟ್ಟಾರೆ ಅಭಿವೃದ್ಧಿಯ ಪ್ರಗತಿ ಮತ್ತಷ್ಟು ವೇಗವಾಗುತ್ತದೆ. ಅದಕ್ಕಾಗಿ ಕೇಂದ್ರ ಸರ್ಕಾರ ತಮಿಳುನಾಡಿಗೆ ಆದ್ಯತೆ ನೀಡುತ್ತದೆ. 2014ಕ್ಕಿಂತ ಹಿಂದಿನ ಅವಧಿಗೆ ಹೋಲಿಸಿದ್ರೆ ತಮಿಳುನಾಡಿಗೆ ಮೂರು ಪಟ್ಟು ಹೆಚ್ಚು ಅನುದಾನ ಎನ್‌ಡಿಎ ಅವಧಿಯಲ್ಲಿ ಹಂಚಿಕೆಯಾಗಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಮೋದಿ – ಈ ಸೇತುವೆ ವಿಶೇಷತೆ ಏನು?

2014ಕ್ಕಿಂತ ಮೊದಲು ತಮಿಳುನಾಡಿಗೆ ವಾರ್ಷಿಕ ಕೇವಲ 900 ಕೋಟಿ ರೂ.ಗಳ ಹಂಚಿಕೆಯಾಗಿತ್ತು, ಆದರೆ ಈ ವರ್ಷ ರಾಜ್ಯದ ರೈಲ್ವೆ ಬಜೆಟ್ 6,000 ಕೋಟಿ ರೂ.ಗಳನ್ನು ಮೀರಿದೆ. ಕೇಂದ್ರ ಸರ್ಕಾರವು ರಾಮೇಶ್ವರಂ ವರ್ಟಿಕಲ್‌ ರೈಲ್ವೆ ಬ್ರಿಡ್ಜ್‌ ಸೇರಿದಂತೆ ತಮಿಳುನಾಡಿನಾದ್ಯಂತ 77 ರೈಲು ನಿಲ್ದಾಣಗಳನ್ನು ಆಧುನೀಕರಿಸಲು ಆದ್ಯತೆ ನೀಡಿದೆ ಎಂದು ವಿವರಿಸಿದರು. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

Share This Article