Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್‌ನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್‌ನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ

Belgaum

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್‌ನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ

Public TV
Last updated: April 8, 2025 9:59 pm
Public TV
Share
4 Min Read
MB Patil and Priyank Kharge
SHARE

-ಕಲಬುರಗಿ ಸೇರಿ ರಾಜ್ಯದ 6 ನಗರ ವಿಮಾನ ಸೇವೆ ಬಲವರ್ಧನೆ – ಎಂ.ಬಿ ಪಾಟೀಲ್

ಬೆಂಗಳೂರು: ಕಲಬುರಗಿ (Kalaburagi) ಸೇರಿದಂತೆ ರಾಜ್ಯದ ಎರಡನೇ ಹಂತದ ಆರು ನಗರಗಳಿಗೆ ವಿಮಾನಯಾನ ಸೇವೆಯನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ (MB Patil) ಅವರು ವಿವಿಧ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.

ಮಂಗಳವಾರ ಅವರು ಖನಿಜ ಭವನದಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೂಡಿ ಹಲವು ವಿಮಾನಯಾನ ಸಂಸ್ಥೆಗಳ ಉನ್ನತಾಧಿಕಾರಿಗಳ ಜೊತೆ ದೀರ್ಘ ಸಭೆ ನಡೆಸಿ, ಚರ್ಚಿಸಿದರು.ಇದನ್ನೂ ಓದಿ: ಏ.10 ರಂದು ಬೆಂಗಳೂರಲ್ಲಿ ಮಾಂಸ ಮಾರಾಟ ನಿಷೇಧ

ಕಲಬುರಗಿ, ಮೈಸೂರು, ಬೀದರ್, ಹುಬ್ಬಳ್ಳಿ, ಬೆಳಗಾವಿ, ವಿದ್ಯಾನಗರ (ಜಿಂದಾಲ್ ಟೌನ್ ಶಿಪ್) ಮತ್ತು ಉದ್ಘಾಟನೆಗೆ ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಗಳಿಂದ ರಾಜ್ಯ ಸೇರಿದಂತೆ ಇತರ ರಾಜ್ಯಗಳಿಗೆ ವಿಮಾನಯಾನ ಸಂಪರ್ಕ ಹೆಚ್ಚಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಇಂಡಿಗೋ, ಸ್ಟಾರ್ ಏರ್, ಏರ್ ಇಂಡಿಯಾ, ಆಕಾಶ್, ಅಲೈಯನ್ಸ್ ಏರ್ ವೇಸ್, ಸ್ಪೈಸ್ ಜೆಟ್ ಸೇರಿದಂತೆ ಎಲ್ಲ ಪ್ರಮುಖ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ!
ಮೈಸೂರು, ಹುಬ್ಬಳ್ಳಿ, ಕಲಬುರಗಿ, ಬೀದರ್, ಬೆಳಗಾವಿ ಹಾಗೂ ವಿದ್ಯಾನಗರ ವಿಮಾನ ನಿಲ್ದಾಣಗಳಲ್ಲಿನ ವಿಮಾನ ಹಾರಾಟ ಸಂಬಂಧ, ಪ್ರಮುಖ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಮಾತುಕತೆ ನಡೆಸಿದೆ.

ಕಲಬುರಗಿಯಿಂದ ಪ್ರಸ್ತುತ ವಾರದಲ್ಲಿ ಕೇವಲ 3 ದಿನಗಳು ಮಾತ್ರ ವಿಮಾನ ಹಾರಾಟ… pic.twitter.com/4Ff0W6WZnJ

— M B Patil (@MBPatil) April 8, 2025

ವಿಮಾನ ಸಂಚಾರಕ್ಕೆ ಕಲಬುರಗಿ ಹೆಚ್ಚು ಲಾಭದಾಯಕ ಮಾರ್ಗವಾಗಿದ್ದರೂ, ಬೆಂಗಳೂರಿನಿಂದ ಕಲಬುರಗಿಗೆ ವಾರಕ್ಕೆ ಕೇವಲ ಮೂರು ದಿನ ಮಾತ್ರ ವಿಮಾನ ಸಂಚಾರ ಇದೆ. ಇದನ್ನು ಮತ್ತಷ್ಟು ಹೆಚ್ಚಿಸಬೇಕು. ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ನಗರ ಹಾಗೂ ಅನ್ಯ ರಾಜ್ಯಗಳ ಪ್ರಮುಖ ನಗರಗಳಿಗೂ ಸಂಪರ್ಕ ಕಲ್ಪಿಸಬೇಕು ಎನ್ನುವ ಬೇಡಿಕೆಯನ್ನು ಇಬ್ಬರೂ ಸಚಿವರು ಸಭೆಯಲ್ಲಿ ಮಂಡಿಸಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

MB Patil and Priyank Kharge 2

ಎಂಆರ್‌ಓ ಸೇವೆಗೂ ಸಿದ್ಧ:
ವಿಮಾನ ಸಂಚಾರದ ಜೊತೆಗೆ ಈ ವಿಮಾನ ನಿಲ್ದಾಣಗಳನ್ನು ವಿಮಾನಗಳ ನಿರ್ವಹಣೆ ಮತ್ತು ರಿಪೇರಿ (ಎಂಆರ್‌ಓ) ಕೇಂದ್ರಗಳಾಗಿಯೂ ಬಳಸಬಹುದು. ದೊಡ್ಡ ದೊಡ್ಡ ನಗರಗಳಲ್ಲಿ ಈ ಸೇವೆ ದುಬಾರಿ ಕೂಡ ಆಗುತ್ತದೆ. ಹೀಗಾಗಿ ಬೆಳಿಗ್ಗೆ ಇಂತಹ ನಗರಗಳಿಂದ ಪ್ರಯಾಣಿಕರನ್ನು ಹೊತ್ತೊಯ್ದು ರಾತ್ರಿ ನಿಲುಗಡೆಗೆ ವಾಪಸ್ಸಾಗಬಹುದು. ಬೇಕಾದರೆ ನಿಲುಗಡೆ ಶುಲ್ಕದಿಂದ ವಿನಾಯಿತಿ ನೀಡಬಹುದು ಎಂದು ಸಚಿವರು ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಲಬುರಗಿಯಲ್ಲಿ ಈ ವ್ಯವಸ್ಥೆ ಮಾಡಿಕೊಡಲು ತಾವು ಸಿದ್ಧ ಇರುವುದಾಗಿಯೂ ಸಚಿವ ಖರ್ಗೆ ಹೇಳಿದರು. ಇದಕ್ಕೆ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಸ್ಪಂದಿಸಿದರು.

ಮೈಸೂರು, ಕಲಬುರಗಿ, ಬೀದರ್, ವಿದ್ಯಾನಗರ ವಿಮಾನ ನಿಲ್ದಾಣಗಳ ಉಪಯೋಗ ಗರಿಷ್ಠ ಮಟ್ಟದಲ್ಲಿ ಆಗುತ್ತಿಲ್ಲ. ಕಲಬುರಗಿ-ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ವಾರಕ್ಕೆ ಮೂರು ದಿನ ಮಾತ್ರ ವಿಮಾನ ಓಡಾಡುತ್ತಿದೆ. ಸ್ಟಾರ್ ಮತ್ತು ಅಲೈಯನ್ಸ್ ವಿಮಾನಯಾನ ಸಂಸ್ಥೆಗಳು ಮೂರು ವರ್ಷಗಳಿಂದ ಹಾರಾಟ ನಿಲ್ಲಿಸಿವೆ. ಕಲಬುರಗಿ ಪ್ರವಾಸೋದ್ಯಮ ಕೇಂದ್ರವಾಗಿದೆ. ಇಲ್ಲಿಂದ ಪುಣೆ, ತಿರುಪತಿ, ಚೆನ್ನೈ, ಮುಂಬೈ ಹೀಗೆ ಹಲವು ಭಾಗಗಳಿಗೆ ವಿಮಾನ ಸಂಚಾರ ಆರಂಭಿಸಿದರೆ ಖಂಡಿತವಾಗಿಯೂ ಲಾಭ ತಂದುಕೊಡಲಿದೆ. ಇಂತಹ ಮಾರ್ಗಗಳಲ್ಲಿ ಸಂಸ್ಥೆಗಳು ಪ್ರಾಯೋಗಿಕ ಸೇವೆ ಕೈಗೊಂಡು ನೋಡಬಹುದು ಎಂದರು.ಇದನ್ನೂ ಓದಿ: ಮಮತಾ ಬ್ಯಾನರ್ಜಿಯ ಟಿಎಂಸಿಯಲ್ಲಿ ನಾಯಕರ ತಿಕ್ಕಾಟ – ಟಿಎಂಸಿ ವಾಟ್ಸಪ್ ಚಾಟ್ ಬಹಿರಂಗಪಡಿಸಿದ ಬಿಜೆಪಿಯ ಅಮಿತ್ ಮಾಳವೀಯ

MB Patil and Priyank Kharge 1

ಮೈಸೂರು ವಿಮಾನ ನಿಲ್ದಾಣದಿಂದ ಕೂಡ ವೈಮಾನಿಕ ಸೇವೆ ಹೆಚ್ಚಾಗಬೇಕು. ಇಲ್ಲಿಂದ ಗೋವಾ, ಕೊಚ್ಚಿನ್, ಹೈದರಾಬಾದ್ ಮುಂತಾದ ನಗರಗಳಿಗೂ ವಿಮಾನಸೇವೆ ಆರಂಭಿಸಬಹುದು. ಬೆಳಗಾವಿಯಿಂದ ಈಗ ವಾರಕ್ಕೆ 44 ವಿಮಾನಗಳು ಓಡಾಡುತ್ತಿವೆ. ಇಲ್ಲಿಂದ ಪುಣೆಗೆ ವಿಮಾನಸೇವೆ ಆರಂಭಿಸಬೇಕೆಂಬ ಬೇಡಿಕೆ ಇದೆ. ಆದರೆ, ಲ್ಯಾಂಡಿಂಗ್ ಸಮಯದ ಅನಾನುಕೂಲತೆ ಇದೆ. ಇಲ್ಲಿಂದ ಚೆನ್ನೈ, ಕೊಚ್ಚಿ ಮುಂತಾದ ಕಡೆಗಳಿಗೆ ವಿಮಾನ ಸೇವೆಗೆ ಒಳ್ಳೆಯ ಅವಕಾಶವಿದ್ದು, ಕಲಬುರಗಿಗೂ ಸೇವೆ ಆರಂಭಿಸಬಹುದು ಎಂದು ವಿವರಿಸಿದರು.

Important Meeting with Airline Representatives!

Held discussions with major airlines to expand flight services from Mysuru, Hubballi, Kalaburagi, Bidar, Belagavi & Vijdyanagar airports.

Kalaburagi currently has flights only three days a week; due to rising demand, I’ve… pic.twitter.com/fJo9x8a3Jr

— M B Patil (@MBPatil) April 8, 2025

ಜಿಂದಾಲ್ ಟೌನ್-ಶಿಪ್‌ನಲ್ಲಿರುವ ವಿಮಾನ ನಿಲ್ದಾಣದಿಂದ ಹೈದರಾಬಾದ್‌ಗೆ ಮಾತ್ರ 2 ವಿಮಾನ ಓಡಾಡುತ್ತಿದೆ. ಇಲ್ಲಿಂದ ಬೆಂಗಳೂರಿಗೂ ವಿಮಾನಯಾನ ಸೇವೆ ಆರಂಭವಾಗಬೇಕು. ಜೊತೆಗೆ ಜಿಂದಾಲ್ ಟೌನ್ಶಿಪ್‌ನಲ್ಲಿ ವಿದೇಶೀಯರೂ ಹೆಚ್ಚಾಗಿದ್ದಾರೆ. ಹತ್ತಿರದಲ್ಲೇ ವಿಶ್ವವಿಖ್ಯಾತ ಹಂಪೆ ಇದೆ. ಆದ್ದರಿಂದ ಬೆಂಗಳೂರು-ಜಿಂದಾಲ್-ಗೋವಾ ಈ ಮಾರ್ಗದಲ್ಲಿ ವಿಮಾನ ಓಡಾಡಿದರೆ ಪರಿಣಾಮಕಾರಿ ಎಂದು ತಿಳಿಸಿದರು.

ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಕೇಂದ್ರ ಸರ್ಕಾರದ ಪರಿಸರ ಇಲಾಖೆಯ ಅನುಮತಿ ಬಾಕಿ ಇದೆ. ವಿಮಾನಯಾನ ಸಂಸ್ಥೆಗಳು ಈಗಿನಿಂದಲೇ ತಮ್ಮ ಸೇವೆ ಆರಂಭಿಸಲು ಸಿದ್ಧತೆ ಮಾಡಿಕೊಂಡಿರಬೇಕು. ಈ ವಿಮಾನ ನಿಲ್ದಾಣ ಆರಂಭವಾದರೆ ಮಹಾರಾಷ್ಟ್ರ, ತೆಲಂಗಾಣ, ಉತ್ತರ ಭಾರತದ ಹಲವು ನಗರಗಳಿಗೆ ವಿಮಾನಸೇವೆ ಸುಲಭವಾಗಲಿದೆ ಎಂದರು.

MB Patil and Priyank Kharge 3

ಸಭೆಯಲ್ಲಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಮುಖ್ಯಸ್ಥೆ ಖುಷ್ಬೂ ಗೋಯೆಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಏ.15ರಿಂದ ಬೀದರ್-ಬೆಂಗಳೂರು ವಿಮಾನಸೇವೆ ಪುನಾರಂಭ:
ಕಾರಣಾಂತರಗಳಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನ ಸೇವೆಯನ್ನು ಸ್ಟಾರ್ ಎರ್ ಸಂಸ್ಥೆಯು ಇದೇ ತಿಂಗಳ 15ರಿಂದ ಪುನಾರಂಭ ಮಾಡಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಚನ್ನಪಟ್ಟಣ ಬೊಂಬೆ ಉದ್ಯಮಕ್ಕೆ ಮರುಜೀವ ನೀಡುವಂತೆ ಡಾ. ಮಂಜುನಾಥ್ ಮನವಿಗೆ ಸ್ಮಂದಿಸಿದ ಕೇಂದ್ರ

TAGGED:airportbengaluruMB PatilPriyank Khargeಎಂ.ಬಿ.ಪಾಟೀಲ್ಕಲಬುರಗಿಪ್ರಿಯಾಂಕ್ ಖರ್ಗೆಬೆಂಗಳೂರು
Share This Article
Facebook Whatsapp Whatsapp Telegram

Cinema news

Gilli Nata 3
ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?
Cinema Latest Main Post TV Shows
Gilli
BBK Season 12 Winner | ಬಿಗ್ ಬಾಸ್ ಟ್ರೋಫಿಗೆ ಮುತ್ತಿಟ್ಟ ಗಿಲ್ಲಿ
Bengaluru City Cinema Latest Main Post TV Shows
Ashwini Gouda 1
BBK Season 12 | ಬಿಗ್‌ ಮನೆಯ ಫೈಯರ್‌ ಬ್ರ್ಯಾಂಡ್‌ ಅಶ್ವಿನಿ ಗೌಡಗೆ 3ನೇ ಸ್ಥಾನ!
Cinema Latest Main Post TV Shows
Gilli Kavya
ಗಿಲ್ಲಿ ಹೇಳಿದಾಗ ಕಾಣಿಸಿಕೊಳ್ಳೋಕೆ ಇದು ಕಪಲ್‌ ಶೋ ಅಲ್ಲ – ಆಚೆ ಬರ್ತಿದ್ದಂತೆ ಕ್ಲ್ಯಾರಿಟಿ ಕೊಟ್ಟ ಕಾವು!
Bengaluru City Cinema Latest Top Stories TV Shows

You Might Also Like

Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
5 hours ago
Ind vs NZ 1
Cricket

ಭಾರತದ ನೆಲದಲ್ಲಿ ಫಸ್ಟ್‌ ಟೈಮ್‌ ಏಕದಿನ ಸರಣಿ ಗೆದ್ದ ಕಿವೀಸ್‌; ಚೇಸ್‌ ಮಾಸ್ಟರ್‌ ಶತಕದ ಹೋರಾಟ ವ್ಯರ್ಥ!

Public TV
By Public TV
6 hours ago
Kavya 01
Bengaluru City

BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?

Public TV
By Public TV
7 hours ago
Raghu
Cinema

BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌

Public TV
By Public TV
8 hours ago
AR Rahman 2
Bollywood

ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ

Public TV
By Public TV
9 hours ago
Dhanush Gowda
Cinema

BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?