ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಬಳಸುವ ಗ್ರಾಹರಿಗೆ ಬಿಗ್ ಶಾಕ್ ಎದುರಾಗಿದೆ. ಎನ್‌ಸಿಎಂಸಿ ಕಾರ್ಡ್ ಹೊಂದಿರುವ ಪ್ರಯಾಣಿಕರು ತಮ್ಮ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಲು ಮತ್ತು ಮೆಟ್ರೋ ಪ್ರಯಾಣಗಳಿಗೆ ಅವುಗಳನ್ನು ಬಳಸಲು ಸಾಧ್ಯವಾಗುತ್ತಿಲ್ಲ.
ತಾಂತ್ರಿಕ ಸಮಸ್ಯೆ ಎದುರಾಗಿದ್ದರಿಂದ ಹಳೆಯ ಮೊಬಿಲಿಟಿ ಕಾರ್ಡ್‌ಗಳಿಗೂ ಕೂಡ ರೀಚಾರ್ಜ್ ಸಮಸ್ಯೆ ಆಗುತ್ತಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ರಿಚಾರ್ಜ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾರ್ಡ್‌ನಲ್ಲಿ ದುಡ್ಡು ಇದ್ದರೂ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: 75 ದೇಶಗಳಿಗೆ 90 ದಿನ ಬ್ರೇಕ್ – ಚೀನಾಗೆ 125% ಟ್ಯಾಕ್ಸ್ ಸಮರ
ಮೊಬಿಲಿಟಿ ಕಾರ್ಡ್‌ನಲ್ಲಿ ಸಮಸ್ಯೆ ಆಗುತ್ತಿದ್ದಂತೆ ಏಪ್ರಿಲ್ 15 ರವರೆಗೂ NCMC ಕಾರ್ಡ್ ವಿತರಣೆ ಮಾಡದೇ ಇರಲು ಬಿಎಂಆರ್‌ಸಿಎಲ್ ನಿರ್ಧಾರ ತೆಗೆದುಕೊಂಡಿದೆ.
ಸಮಸ್ಯೆ ಯಾಕಾಯ್ತು?
NCMC ಪೂರೈಸುವ RBL ಬ್ಯಾಂಕ್ ತನ್ನ ಮಾರಾಟಗಾರರನ್ನು ಬದಲಾಯಿಸಿದ ನಂತರ ಬ್ಯಾಕೆಂಡ್ ವ್ಯವಸ್ಥೆಗಳಲ್ಲಿನ ಪರಿವರ್ತನೆಯಿಂದ ಈ ಸಮಸ್ಯೆಗಳು ಉಂಟಾಗಿವೆ. ಏಪ್ರಿಲ್ 15 ರೊಳಗೆ ಈ ಸಮಸ್ಯೆ ಬಗೆಹರಿಯಲಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋರ್ಟ್‌ಗೆ ಗೈರು, ಸಿನಿಮಾ ವೀಕ್ಷಣೆಗೆ ದರ್ಶನ್ ಹಾಜರ್
ಸಂಪರ್ಕವಿಲ್ಲದ ಸ್ಮಾರ್ಟ್ ಕಾರ್ಡ್‌ಗಳು, ಟೋಕನ್‌ಗಳು ಅಥವಾ QR ಕೋಡ್‌ಗಳನ್ನು ಬಳಸುವವರಿಗೆ ಹೋಲಿಸಿದರೆ NCMC ಕಾರ್ಡ್ ಬಳಕೆದಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ.
ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಅನ್ನು ನಮ್ಮ ಮೆಟ್ರೋ, ಬಿಎಂಟಿಸಿ ಸೇರಿ ದೇಶದ ಎಲ್ಲ ಸಾರಿಗೆ ವ್ಯವಸ್ಥೆಗಳು ಹಾಗೂ ಚಿಲ್ಲರೆ ಅಂಗಡಿ, ಪೆಟ್ರೋಲ್ ಬಂಕ್‌ಗಳು, ಶಾಪಿಂಗ್ ಮಾಲ್‌ಗಳಲ್ಲಿ ಬಳಕೆ ಮಾಡಬಹುದು.