Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕಪಟ ನಾಟಕ ಸೂತ್ರಧಾರಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು ಡಾಲಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕಪಟ ನಾಟಕ ಸೂತ್ರಧಾರಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು ಡಾಲಿ!

Cinema

‘ಕಪಟ ನಾಟಕ ಸೂತ್ರಧಾರಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು ಡಾಲಿ!

Public TV
Last updated: April 10, 2025 10:52 am
Public TV
Share
2 Min Read
daali dhananjay
SHARE

ಮತ್ತೊಂದು ಹೊಸಬರ ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ತಯಾರಾಗಿದೆ. ನವ ಪ್ರತಿಭೆಗಳು ಸೇರಿ ರೂಪಿಸಿರುವ ‘ಕಪಟ ನಾಟಕ ಸೂತ್ರಧಾರಿ’ ಚಿತ್ರದ (Kapata Nataka Soothradaari) ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಗಿಸಿಕೊಂಡು ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಧೀರಜ್ ಎಂ.ವಿ ನಿರ್ದೇಶನ ಹಾಗೂ ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಪಾದಾರ್ಪಣೆ ಮಾಡುತ್ತಿರುವ ಈ ಚೊಚ್ಚಲ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಡಾಲಿ ಧನಂಜಯ (Daali Dhananjay), ಸಂಗೀತಾ ಭಟ್, ನಿರ್ದೇಶಕರಾದ ಮಂಸೋರೆ, ಕೆ.ಎಂ ಚೈತನ್ಯ ಮುಂತಾದವರು ಸಾಮಾಜಿಕ ಜಾಲತಾಣದ ಮೂಲಕ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಪೋಸ್ಟರ್ ಮೂಲಕವೇ ಒಟ್ಟಾರೆ ಕಥನದ ಬಗ್ಗೆ ಕುತೂಹಲ ಮೂಡಿಕೊಳ್ಳುತ್ತಲೇ ಮತ್ತೊಂದಷ್ಟು ವಿಚಾರಗಳು ಜಾಹೀರಾಗಿವೆ. ಇದನ್ನೂ ಓದಿ:ನಾನ್ಯಾಕೆ 2ನೇ ಮದುವೆಯಾಗಿಲ್ಲ: ಸೀಕ್ರೆಟ್ ಬಿಚ್ಚಿಟ್ಟ ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ

kapata nataka soothradaari 2‘ಕಪಟ ನಾಟಕ ಸೂತ್ರಧಾರಿ’ ಈ ಸಮಾಜಕ್ಕೆ ಕನ್ನಡಿ ಹಿಡಿದಂಥಾ ಕಥೆಯನ್ನೊಳಗೊಂಡಿರುವ ಚಿತ್ರ. ಇಲ್ಲಿ ಹಾಸುಹೊಕ್ಕಾಗಿರುವ ತಾರತಮ್ಯ, ಶೋಷಣೆಗಳ ಕಥಾ ಎಳೆಯನ್ನೊಳಗೊಂಡಿರುವ ಈ ಸಿನಿಮಾ ಸಾಮಾಜಿಕ, ರಾಜಕೀಯ ವಿಡಂಬನಾತ್ಮಕ ಡ್ರಾಮಾ ಜಾನರಿಗೆ ಒಗ್ಗಬಹುದಾದ ಸಿನಿಮಾ. ಇದರ ಚಿತ್ರೀಕರಣ ನಡೆದ ಸ್ಥಳ ಮತ್ತು ರೀತಿಯ ವಿವರ ನೋಡಿದರೆ, ಕಥೆಯ ಬಗೆಗೊಂದು ಕುತೂಹಲ ಮೂಡಿಕೊಳ್ಳುತ್ತೆ. ಇದರ ಬಹುಪಾಲು ಚಿತ್ರೀಕರಣ ಒಂದು ಸಾವಿರ ವರ್ಷಗಳಷ್ಟು ಪುರಾತನ ಇತಿಹಾಸ ಹೊಂದಿರುವ ಉತ್ತರಕರ್ನಾಟಕದ ದೇವಸ್ಥಾನದ ಆವರಣದಲ್ಲಿ ನಡೆದಿದೆ. 25 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಶುರುವಾಗಿದ್ದ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಅಂತಿಮ ಹಂತದಲ್ಲಿದೆ. ಇದನ್ನೂ ಓದಿ:ಕೋರ್ಟ್‌ಗೆ ಗೈರು, ಸಿನಿಮಾ ವೀಕ್ಷಣೆಗೆ ದರ್ಶನ್‌ ಹಾಜರ್

ನಿಮ್ಮ ಹೊಸ ಪ್ರಯತ್ನಕ್ಕೆ ಒಳ್ಳೆದಾಗಲಿ @mvdhiraj @Kannadafilmclub @muralishankark And all the best to the entire team of #kapatanatakasoothradaari pic.twitter.com/2sF5fp8yBk

— Dhananjaya (@Dhananjayaka) April 6, 2025

ವಿಶೇಷವೆಂದರೆ, 100ಕ್ಕೂ ಹೆಚ್ಚು ಮಂದಿ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ. ಒಂದಷ್ಟು ಹೂಡಿಕೆದಾರರು ಸೇರಿ ವಿ ಎಸ್ ಕೆ ಸಿನಿಮಾಸ್ ಬ್ಯಾನರ್‌ ನಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮೂಲತಃ ರಂಗಭೂಮಿ ಕಲಾವಿದರಾದ ಅಭಿರಾಮ ಅರ್ಜುನ ಈ ಸಿನಿಮಾದ ಬ್ಯುಸಿನೆಸ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಭಿನ್ನ ಧಾಟಿಯ, ಚೆಂದದ ಸಿನಿಮಾಗಳನ್ನು ರೂಪಿಸುವ, ಪ್ರತಿಭಾನ್ವಿತ ತಂಡಕ್ಕೆ ಸಾಥ್ ಕೊಡುವ ಮಹತ್ವಾಕಾಂಕ್ಷೆಯೊಂದಿಗೆ ಅಭಿರಾಮ ಚಿತ್ರರಂಗಕ್ಕೆ ಅಡಿಯಿರಿಸಿದ್ದಾರೆ.

kapata nataka soothradaari

ಮೂಲತಃ ಇಂಜಿನಿಯರ್ ಆಗಿರುವ ಧೀರಜ್ ಎಂ.ವಿ ಈ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಸುನಿಲ್ ಕುಮಾರ್ ದೇಸಾಯಿ, ಮಠ ಗುರುಪ್ರಸಾದ್ ಮುಂತಾದವರ ಗರಡಿಯಲ್ಲಿ ಕಾರ್ಯನಿರ್ವಹಿಸಿರುವ ಧೀರಜ್ ಈಗಾಗಲೇ ಒಂದು ಕಿರುಚಿತ್ರಗಳನ್ನೂ ನಿರ್ದೇಶನ ಮಾಡಿದ ಅನುಭವ ಹೊಂದಿದ್ದಾರೆ. ವೀರೇಶ್ ಎನ್ ಟಿ ಎ ಛಾಯಾಗ್ರಹಣ, ಪ್ರಸನ್ನ ಕುಮಾರ್ ಎಂ.ಎಸ್ ಸಂಗೀತ ನಿರ್ದೇಶನ ಹಾಗೂ ಮುರಳಿ ಶಂಕರ್ ಸಹ ನಿರ್ದೇಶನವಿರುವ ಈ ಚಿತ್ರದಲ್ಲಿ ಹರೀಶ್ ರಂಗರಾವ್ ಕ್ರಿಯೇಟಿವ್ ಹೆಡ್ ಆಗಿ, ವರುಣ್ ಗುರುರಾಜ್ ಪ್ರೊಡಕ್ಷನ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ತಾರಾಗಣದ ಬಗೆಗಿನ ವಿವರಗಳನ್ನು ಚಿತ್ರತಂಡ ಶೀಘ್ರದಲ್ಲೇ ಹಂಚಿಕೊಳ್ಳಲಿದೆ.

TAGGED:daali dhananjayKapata Nataka Soothradaari Filmಕಪಟ ನಾಟಕ ಸೂತ್ರಧಾರಿ ಚಿತ್ರಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
22 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
24 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
28 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
29 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
46 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?