ಡಿಸಿಗೆ ಪ್ರಮೋದಾದೇವಿ ಪತ್ರ – ಜಾಗ ನೀಡಿದ್ರೆ 4500 ಜನರ ಇಡೀ ಗ್ರಾಮವೇ ಖಾಲಿ!

Public TV
2 Min Read
Pramoda Devi Wadiyar letter to Chamarajanagara DC If land is given the entire Siddayayanapura village of 4500 people will be empty 2

ಚಾಮರಾಜನಗರ: ಮೈಸೂರು ಮಹಾರಾಜರಿಗೆ ಸೇರಿರುವ ಆಸ್ತಿಯನ್ನು ಖಾತೆ ಮಾಡಿಕೊಡುವಂತೆ ಮೈಸೂರಿನ ರಾಣಿ ಪ್ರಮೋದಾದೇವಿ ಒಡೆಯರ್ (Pramod Devi Wadiyar) ಚಾಮರಾಜನಗರ ಜಿಲ್ಲಾಧಿಕಾರಿ (Chamarajanagara DC) ಪತ್ರ ಬರೆದಿದ್ದರಿಂದ ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ.

ಸಿದ್ದಯ್ಯನಪುರದ ಮೂಲ ಹೆಸರೇ ಜಯಚಾಮರಾಜೇಂದ್ರ ಪುರಂ. ಈಗ ಊರಿಗೆ ಊರೇ ಖಾಲಿ ಮಾಡಬೇಕಾದ ಆತಂಕ ಎದುರಾಗಿದೆ. 4,000 ಕ್ಕೂ ಹೆಚ್ಚು ಜನರು ಸಿದ್ದಯ್ಯನಪುರ ಗ್ರಾಮದಲ್ಲಿ ವಾಸ ಮಾಡುತ್ತಿದ್ದಾರೆ. ಇಂದಿಗೂ ಮಹಾರಾಜರ ಫೋಟೋವನ್ನು ಮನೆಯ ದೇವರ ಕೋಣೆಯಲ್ಲಿ ಗ್ರಾಮಸ್ಥರು ಇಟ್ಟುಕೊಂಡಿದ್ದಾರೆ. ಪ್ರತಿ ವರ್ಷ ಮಹಾರಾಜರ ಭಾವಚಿತ್ರ ಮೆರವಣಿಗೆ ಮಾಡಿ ಅವರ ಜನ್ಮ ದಿನ ಆಚರಿಸಿಕೊಂಡು ಬರುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ಮಹಾರಾಜರಿಗೆ ಸೇರಿರುವ 4,500 ಎಕ್ರೆ ಭೂಮಿ ವರ್ಗಕ್ಕೆ ಪ್ರಮೋದಾದೇವಿ ಪತ್ರ

Pramoda Devi Wadiyar letter to Chamarajanagara DC If land is given the entire Siddayayanapura village of 4500 people will be empty 1

ಜಯಚಾಮರಾಜೇಂದ್ರ ಒಡೆಯರ್ ನಮಗೆ 1,035 ಎಕರೆ ಭೂಮಿ ದಾನ ನೀಡಿದ್ದಾರೆ. 1982 ರಲ್ಲಿ ಸಚಿವರಾಗಿದ್ದ ಬಿ ರಾಚಯ್ಯ ಕಾಲದಲ್ಲಿ ಸರ್ಕಾರ ಸಾಗುವಳಿ ಚೀಟಿ ನೀಡಿದೆ. ಈಗಲೂ ಮಹಾರಾಜರ ಹೆಸರೇಳಿಕೊಂಡು ಬದುಕುತ್ತಿದ್ದೇವೆ. ರಾಣಿ ಪ್ರಮೋದಾದೇವಿಗೆ ಖಾತೆ ಮಾಡಿಕೊಟ್ಟಲ್ಲಿ ಇಡೀ ಗ್ರಾಮದವರು ಮೈಸೂರು ಅರಮನೆಗೆ ಹೋಗುತ್ತೇವೆ. ಅವರೇ ನಮಗೆ ಹಿಟ್ಟು ಬಟ್ಟೆ ಕೊಟ್ಟು ಸಾಕಲಿ ಅಂತಿದ್ದಾರೆ.

ಪ್ರಮೋದಾದೇವಿ ಅವರಿಗೆ ಖಾತೆ ಮಾಡಿ ಕೊಟ್ಟರೆ ಇಡೀ ಊರಿಗೆ ಊರೆ ಖಾಲಿ ಮಾಡಬೇಕಾಗುತ್ತದೆ. ಮಕ್ಕಳು ಮರಿ ಕಟ್ಟಿಕೊಂಡು ಎಲ್ಲಿಗೆ ಹೋಗಬೇಕು? ನಾವು ಇದ್ರು ಇಲ್ಲೇ ಸತ್ರು ಇಲ್ಲೇ ಸಾಯ್ತೀವಿ ಎಂದು ಸಿದ್ದಯ್ಯನಪುರ ಗ್ರಾಮಸ್ಥರ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: 1 ಲಕ್ಷ ಪಾವತಿಸಿ ಶೂಟಿಂಗ್‌ | ಗೋಪಾಲಸ್ವಾಮಿ ಬೆಟ್ಟದ ಜಾಗ ಯಾರಿಗೆ ಸೇರಿದ್ದು? ಈಗ ಮತ್ತೊಂದು ವಿವಾದ

ಚಾಮರಾಜನಗರ ತಾಲ್ಲೂಕಿನ ವಿವಿಧೆಡೆ 4,500 ಎಕರೆಗು ಹೆಚ್ಚು ಭೂಮಿ ಮೈಸೂರು (Mysuru) ಮಹಾರಾಜರ ಖಾಸಗಿ ಸ್ವತ್ತು ಎಂದು ಪತ್ರ ಮೈಸೂರಿನ ರಾಣಿ ಬರೆದಿದ್ದರು.ಇದೇ ವ್ಯಾಪ್ತಿಯಲ್ಲಿ ಸಿದ್ದಯ್ಯನಪುರ ಗ್ರಾಮ ಬರುತ್ತದೆ. ಮೈಸೂರು ಮಹಾರಾಜರು ಹಾಗೂ ಭಾರತ ಸರ್ಕಾರದ ನಡುವೆ ಆಗಿರುವ ಒಪ್ಪಂದದ ಪ್ರಕಾರ 4,500 ಎಕರೆಗೂ ಹೆಚ್ಚು ಭೂಮಿ ಮೈಸೂರು ಮಹಾರಾಜರ ಖಾಸಗಿ ಸ್ವತ್ತು ಎಂದು ಪತ್ರದಲ್ಲಿ ಪ್ರಮೋದಾದೇವಿ ಉಲ್ಲೇಖಿಸಿದ್ದಾರೆ.

Share This Article