ಬೆಂಗಳೂರು: ಏನು ಮಾಡೋದು ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಪಂಚಾಂಗ ನೋಡ್ತಾರೆ. ಕೆಲವರು ಗಿಳಿಶಾಸ್ತ್ರ ಕೇಳ್ತಾರೆ. ನಾವು ಸಂವಿಧಾನ ನೋಡುತ್ತೇವೆ. ಸಂವಿಧಾನದಲ್ಲಿ ಎಲ್ಲದಕ್ಕೂ ಅವಕಾಶ ಇದೆ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.
ಜಾತಿಗಣತಿ ಜಾರಿಗೆ ವಿಳಂಬ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಗಿಗೆ ತುಪ್ಪ ಸವರುವುದಕ್ಕೆ ನಾವು ಗಂಜಲ ರಾಜ್ಯದವರು ಅಲ್ಲ. ನಾವು ನಂದಿನ ಹಾಲಿನ ರಾಜ್ಯದವರು. ಏಪ್ರಿಲ್ 17ಕ್ಕೆ ಜಾತಿಗಣತಿ ಬಗ್ಗೆ ತೀರ್ಮಾನ ಆಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸಂಬಂಧಗಳು ಇಂದು ಗಟ್ಟಿಯಾಗಿ ಉಳಿದಿದೆ ಅಂದ್ರೆ ಅಪ್ಪಾಜಿ ಸಿನಿಮಾಗಳೇ ಕಾರಣ: ಶಿವಣ್ಣ
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಏರಿಕೆ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ದತ್ತಾಂಶ ಇಲ್ಲ ಎಂದು ಹೇಳಿ ಆಗ ಸುಪ್ರೀಂ ಕೋರ್ಟ್ ಸೂಚನೆ ಕೊಟ್ಟಿತ್ತು. ಜಡ್ಜ್ಮೆಂಟ್ ಕೊಟ್ಟಿಲ್ಲ. 50% ಮೀಸಲಾತಿ ದಾಟುವಂತಿಲ್ಲ ಅನ್ನೋದು ಡೈರೆಕ್ಷನ್ ಅಷ್ಟೇ ಎಂದು ಹೇಳಿದರು. ಇದನ್ನೂ ಓದಿ: ಅಯೋಧ್ಯೆಯ ಗೆಸ್ಟ್ ಹೌಸ್‌ನಲ್ಲಿ ಮಹಿಳೆ ಸ್ನಾನ ಮಾಡುವ ವೀಡಿಯೋ ಸೆರೆ ಹಿಡಿದವ ಅರೆಸ್ಟ್
ಈಗ ನಮ್ಮ ಬಳಿ ಜಾತಿಗಣತಿ ಡೇಟಾ ಇದೆ. ಅದರ ಪ್ರಕಾರ ಮೀಸಲಾತಿ ಹೆಚ್ಚಿಸಬಹುದು. ರಾಹುಲ್ ಗಾಂಧಿ ಅವರು 75% ಮೀಸಲಾತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ತೆಲಂಗಾಣದಲ್ಲಿ ಆಗಿದೆ. ಎರಡನೇ ಹೆಜ್ಜೆ ಕರ್ನಾಟಕದ್ದು, ನಂತರ ಜಾರ್ಖಂಡ್, ಬಳಿಕ ದೇಶದೆಲ್ಲೆಡೆ ಜಾರಿಗೆ ತರುತ್ತೇವೆ ಎಂದರು. ಇದನ್ನೂ ಓದಿ: ಜಾತಿಗಣತಿ ಶಿಫಾರಸು: ಓಬಿಸಿ, ಮುಸ್ಲಿಂ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತಾ ಸರ್ಕಾರ?
ಇದೇ ವೇಳೆ ಜಾತಿ ಜನಗಣತಿ ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಶಾಮನೂರು ಶಿವಶಂಕರಪ್ಪ ವಿರುದ್ಧ ಬಿ.ಕೆ.ಹರಿಪ್ರಸಾದ್ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಯಾರೂ ಧಮ್ಮಿ ಹಾಕಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು. ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಂದಾಗ ಏಕೆ ವಿರೋಧಿಸಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.