ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿ, ಸಾವಿನ ವಿಚಾರ ಕೇಳಿ ಶಾಕ್ ಆಯ್ತು ಎಂದಿದ್ದಾರೆ ಧ್ರುವ ಸರ್ಜಾ. ಇದನ್ನೂ ಓದಿ:ಬ್ಯಾಂಕ್ ಜನಾರ್ಧನ್ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಟ್ಟೆ: ಉಪೇಂದ್ರ
ಬ್ಯಾಂಕ್ ಜನಾರ್ಧನ್ (Bank Janardhan) ಅವರನ್ನು ನಾವು ಚಿಕ್ಕವರಿಂದ ನೋಡಿಕೊಂಡು ಬೆಳೆದಿದ್ದೇವೆ. ನಮ್ಮ ಕಿಶೋರ್ ಅಂಕಲ್ (Kishore Sarja) ಅವರ ಕ್ಲೋಸ್ ಫ್ರೆಂಡ್ ಆಗಿದ್ರು. ಇವತ್ತು ಅವರು ನಮ್ಮ ಜೊತೆಯಿಲ್ಲ ಎಂಬುದನ್ನು ಕೇಳಿ ಶಾಕ್ ಆಯ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಧೈರ್ಯ ಕೊಡಲಿ ಎಂದು ಧ್ರುವ ಸರ್ಜಾ ಮಾತನಾಡಿದ್ದಾರೆ. ಇದನ್ನೂ ಓದಿ:ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.
80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.