– ಕಾಂಗ್ರೆಸ್ ಬೆತ್ತಲಾಗುತ್ತಿದೆ ಎಂದು ಛಲವಾದಿ ಟೀಕೆ
ಬೆಂಗಳೂರು: ಜನ ಈಗ ಕಾಂಗ್ರೆಸ್ಸನ್ನು ಧಿಕ್ಕರಿಸಿದ್ದರಿಂದ ಪಾಪ ಅವರಿಗೆ ಈಗ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನೆನಪಾಗುತ್ತಿದೆ. ಅಂಬೇಡ್ಕರ್ ಅವರು ಸಂವಿಧಾನಶಿಲ್ಪಿ ಎಂದು ಈಗ ನೆನಪಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B Y Vijayendra) ಟೀಕಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತಕ್ಕೆ ಸಂವಿಧಾನ ಕೊಟ್ಟ ಅಂಬೇಡ್ಕರ್‌ರನ್ನು ಕಾಂಗ್ರೆಸ್‌ನವರು ಹೇಗೆ ನಡೆಸಿಕೊಂಡರು ಎಂಬ ಸತ್ಯ, ರಾಜ್ಯ ಮತ್ತು ದೇಶದ ಜನತೆಗೆ ಗೊತ್ತಾಗಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಜಾತಿ ಸಮೀಕ್ಷೆ | 1 ಕೋಟಿ ಜನರನ್ನು ಸಮುದ್ರಕ್ಕೆ ಬಿಡಬೇಕಾ? – ಅಶೋಕ್ ಕಿಡಿ
ಭಾರತದ ನಿಜವಾದ ರತ್ನವಾಗಿದ್ದ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲು ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಬಿಜೆಪಿ ಬೆಂಬಲಿಸಿದ ವಿ.ಪಿ.ಸಿಂಗ್ ಅವರ ಸರ್ಕಾರವೇ ಬರಬೇಕಾಯಿತಲ್ಲವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಏ. 15ರಿಂದ ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 2ರಲ್ಲಿ ವಿಮಾನಯಾನ ಸ್ಥಗಿತ
ಕಾಂಗ್ರೆಸ್‌ನವರು ಸ್ವಾತಂತ್ರ‍್ಯದ ನಂತರದಲ್ಲಿ 50-55 ವರ್ಷಗಳ ಕಾಲ ಸುದೀರ್ಘವಾಗಿ ಆಡಳಿತ ನಡೆಸಿದ್ದಾರೆ. 40-45 ವರ್ಷಗಳ ಕಾಲ ಸುದೀರ್ಘವಾಗಿ ಗಾಂಧಿ ಕುಟುಂಬವೇ ಈ ದೇಶದ ಆಡಳಿತದ ಚುಕ್ಕಾಣಿ ಹಿಡಿದಿದ್ದರೂ ಸಹ ಮಹಾನ್ ನಾಯಕ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡಲು ಕಾಂಗ್ರೆಸ್‌ನವರಿಗೆ ಆಗಲಿಲ್ಲ. ಗಾಂಧಿ ಕುಟುಂಬಕ್ಕೆ 3 ಭಾರತರತ್ನ ಸಿಗುತ್ತದೆ. ಆದರೆ ಸಂವಿಧಾನಶಿಲ್ಪಿ ಅಂಬೇಡ್ಕರ್‌ರಿಗೆ ಭಾರತರತ್ನ ಕೊಡಬೇಕೆಂಬ ವಿಚಾರವು ಕಾಂಗ್ರೆಸ್‌ನವರ ತಲೆಯಲ್ಲಿ ಯಾವತ್ತೂ ಬರಲಿಲ್ಲ ಎಂದು ಎಂದು ಕಿಡಿಕಾರಿದರು. ಇದನ್ನೂ ಓದಿ: ದೊಡ್ಡಗೌಡ್ರು, ಕುಮಾರಣ್ಣನ ಮನೆಗೂ ಬಂದಿಲ್ಲ,ಸಿದ್ದರಾಮಯ್ಯನವರಿಗಾಗಿಯೇ ಮಾಡಿದ ವರದಿ: ನಿಖಿಲ್ ಕಿಡಿ
ಕಾಂಗ್ರೆಸ್ ಬೆತ್ತಲಾಗುತ್ತಿದೆ:
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಮಾತನಾಡಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಇದ್ದುದಕ್ಕಿಂತ ಹೆಚ್ಚು ಈಗ ಪ್ರಸ್ತುತವಾಗಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಗಣತಿ ದಂಗಲ್ – ಒಕ್ಕಲಿಗ ಶಾಸಕರ ಸಭೆ ಕರೆದ ಡಿಸಿಎಂ
ಬಹುಕಾಲ ನಮ್ಮನ್ನು ಆಡಳಿತ ಮಾಡಿದವರು ನ್ಯೂನತೆಗಳನ್ನು ಸರಿಪಡಿಸಿದ್ದಾರಾ? ಸಮಸ್ಯೆಗಳನ್ನು ಪರಿಹರಿಸಿದ್ದಾರಾ? ಕಾಂಗ್ರೆಸ್ ಪಕ್ಷವು ಅನೇಕ ಸತ್ಯಗಳನ್ನು ಬಚ್ಚಿಟ್ಟು, ಕತ್ತಲಲ್ಲಿಟ್ಟು ಸಮಾಜಕ್ಕೆ ಬೇರೆಯದನ್ನೇ ತೋರಿಸುತ್ತಿದ್ದರು. ಕಾಂಗ್ರೆಸ್ಸಿನ ಕತ್ತಲ ಕೋಣೆಯ ಸತ್ಯಗಳು ನನಗೂ ಅರಿವಿದೆ. ಈಗ ಸತ್ಯಗಳ ಅನಾವರಣ ಒಂದೊಂದಾಗಿ ಆಗುತ್ತಿದೆ. ಕತ್ತಲು ಹೋಗಿ ಕಾಂಗ್ರೆಸ್ ಬೆತ್ತಲಾಗುತ್ತಿದೆ ಎಂದು ಟೀಕಿಸಿದರು.