– ಸಿಎಂ ಪಾಲಿಗೆ ಬಿಗ್ ಡೇ! ಲೋಕಾಯುಕ್ತ ಕ್ಲೀನ್‌ಚೀಟ್ ಸರಿ ಇದ್ಯಾ? ಅಥವಾ ಇಲ್ವಾ? – ಅಂತಿಮ ಆದೇಶ ನೀಡಲಿದೆ ಕೋರ್ಟ್
ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಪಾಲಿಗೆ ಇಂದು ಬಿಗ್ ಡೇ. ಮುಡಾ ಹಗರಣ (MUDA Case) ವಿಚಾರದಲ್ಲಿ ಸಿಎಂ ಹಾಗೂ ಸಿಎಂ ಕುಟುಂಬಕ್ಕೆ ಲೋಕಾಯುಕ್ತರು ನೀಡಿರುವ ಕ್ಲೀನ್ ಚೀಟ್ ಪ್ರಶ್ನಿಸಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೂರುದಾರ ಸ್ನೇಹಮಹಿ ಕೃಷ್ಣ ಅರ್ಜಿ ಹಾಕಿದ್ದರು. ಇಡಿ ಕೂಡ ಲೋಕಾಯುಕ್ತ ವರದಿ ಪ್ರಶ್ನಿಸಿ ಅರ್ಜಿ ಹಾಕಿತ್ತು. ಎಲ್ಲರ ವಾದ ಆಲಿಸಿರುವ ನ್ಯಾಯಾಲಯ ಇವತ್ತು ಲೋಕಾಯುಕ್ತ ವರದಿ ಒಪ್ಪಿಕೊಳ್ಳಬೇಕಾ ಅಥವಾ ತಿರಸ್ಕರಿಸಬೇಕಾ ಎಂಬ ಆದೇಶ ನೀಡಲಿದೆ.
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ಜನಪ್ರತಿನಿಧಿ ನ್ಯಾಯಾಲಯ ಲೋಕಾಯುಕ್ತ ರೀಪೋರ್ಟ್ ರದ್ದು ಮಾಡುವ ವಿಶ್ವಾಸವಿದೆ. ಸಿಎಂ ಹಾಗೂ ಸಿಎಂ ಕುಟುಂಬದ ಮೇಲಿನ ಎಲ್ಲಾ ಆರೋಪಕ್ಕೂ ಸಾಕ್ಷಿ ಇವೆ. ಲೋಕಾಯುಕ್ತ ಸಿಎಂ ಪ್ರಭಾವಕ್ಕೆ ಒಳಗಾಗಿ ಕ್ಲೀನ್‌ಚೀಟ್ ಕೊಟ್ಟಿದೆ. ನ್ಯಾಯಾಲಯಕ್ಕೆ ಇದನ್ನು ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರದ್ದು ಕಾಂಟ್ರ್ಯಾಕ್ಟ್ ಮ್ಯಾರೇಜ್, ಹಿಂದೂಗಳ ರೀತಿ ಏಳು ಜನ್ಮದ ಅನುಬಂಧ ಅಲ್ಲ: ರಾಯರೆಡ್ಡಿ
ನ್ಯಾಯಾಲಯ ಲೋಕಾಯುಕ್ತ ರೀಪೋರ್ಟ್ ತಿರಸ್ಕರಿಸುವ ಸಾಧ್ಯತೆ ಇದೆ. ನ್ಯಾಯಾಲಯ ಲೋಕಾಯುಕ್ತ ರೀಪೋರ್ಟ್ ತಿರಸ್ಕರಿಸದೆ ಇದ್ದರೆ ನಾನು ಹೈಕೋರ್ಟ್‌ಗೆ ಅರ್ಜಿ ಹಾಕುತ್ತೇನೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ನಡೆಸಿತ್ತು. ತನಿಖೆಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್ ಕೊಟ್ಟಿತ್ತು. ಇದನ್ನೂ ಓದಿ: ಜಾತಿ ಜನಗಣತಿ ಯಾವುದೇ ಸಮಾಜದ ಪರ, ವಿರೋಧ ನಿರ್ಣಯ ಮಾಡೋದಲ್ಲ: ಶಿವಾನಂದ ಪಾಟೀಲ್