ಮೆಟ್ರೋ ಯಡವಟ್ಟಿಗೆ ಮತ್ತೊಂದು ಬಲಿ – ವಯಾಡೆಕ್ಟ್ ಉರುಳಿ ಬಿದ್ದು ಆಟೋ ಅಪ್ಪಚ್ಚಿ, ಚಾಲಕ ಸಾವು!

Public TV
1 Min Read
Namma Metro 4

– ಮಧ್ಯರಸ್ತೆಯಲ್ಲೇ ಎರಡು ತುಂಡಾದ ಲಾರಿ
– ಆಟೋ ಪ್ರಯಾಣಿಕ ಗ್ರೇಟ್‌ ಎಸ್ಕೇಪ್‌

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ (Namma Metro Work) ವೇಳೆ ನಿರ್ಲಕ್ಷ್ಯ ತೋರಿದ ಪರಿಣಾಮ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಳಿ ನಡೆದಿದೆ.

Namma Metro

ಖಾಸಿಂ ಸಾಬ್ ಮೃತ ಆಟೋ ಚಾಲಕ. ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಆದ್ರೆ ಆಟೋದಲ್ಲಿದ್ದ ಪ್ಯಾಸೆಂಜರ್‌ ಕೊಂಚದರಲ್ಲೇ ಎಸ್ಕೇಪ್‌ ಆಗಿದ್ದಾರೆ.

ದುರಂತ ಸಂಭವಿಸಿದ್ದು ಹೇಗೆ?
ಮೆಟ್ರೋ ತಡೆಗೋಡೆ ನಿರ್ಮಾಣಕ್ಕಾಗಿ ಬೃಹತ್‌ ಗಾತ್ರದ ವಯಾಡೆಕ್ಟ್ (ಸಿಮೆಂಟ್‌ ಗೋಡೆ) ಕೊಂಡೊಯ್ಯಲಾಗುತ್ತಿತ್ತು. ಏರ್ಪೋಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಕೋಗಿಲು ಕ್ರಾಸ್‌ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ತುಂದಾಗಿದೆ. ಪರಿಣಾಮ ವಯಾಡೆಕ್ಟ್‌ ನೆಲಕ್ಕುರುಳಿದೆ.

Namma Metro 4

ಇದೇ ಸಂದರ್ಭದಲ್ಲಿ ಲಾರಿ ಪಕ್ಕದಲ್ಲೇ ಇದ್ದ ಆಟೋ ಮೇಲೆ ವಯಾಡೆಕ್ಟ್‌ ಬಿದ್ದಿದೆ. ಲಾರಿ ತುಂಡಾಗಿ ವಯಾಡೆಕ್ಟ್‌ ಬೀಳುತ್ತಿದ್ದಂತೆ ಆಟೋದಲ್ಲಿದ್ದ ಪ್ಯಾಸೆಂಜರ್‌ ತಕ್ಷಣಕ್ಕೆ ಇಳಿದು ಓಡಿಹೋಗಿದ್ದಾರೆ, ಆದ್ರೆ, ಚಾಲಕ ಇಳಿಯುವಷ್ಟರಲ್ಲಿ ಆಟೋ ಮೇಲೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಸಹ ಸಂಪೂರ್ಣ ಅಪ್ಪಚ್ಚಿಯಾಗಿದೆ.

2023ರ ಜನವರಿಯಲ್ಲಿ ಇದೇ ರೀತಿ ನಾಗವಾರ ಮುಖ್ಯ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೃಹತ್‌ ಗಾತ್ರದ ಡೆಕ್ಟ್‌ ಕುಸಿದು ಬೈಕ್‌ ಸವಾರ ಸಾವಪ್ಪಿದ ಘಟನೆ ನಡೆದಿತ್ತು. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article