ಬೆಂಗಳೂರು: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble) ಅವರಿಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರನ್ನ ಭೇಟಿಯಾದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಉಪಮುಖ್ಯಮಂತ್ರಿಗಳನ್ನ ಭೇಟಿಯಾದರು.
Glad to have met former India captain and legendary spinner Shri Anil Kumble at my residence today. Always a pleasure to engage in conversation with this proud Kannadiga who has brought immense pride to Karnataka and Indian cricket. pic.twitter.com/H1zJmiXGDw
— DK Shivakumar (@DKShivakumar) April 18, 2025
ಈ ಕುರಿತು ಡಿಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ನನ್ನ ನಿವಾಸದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಭೇಟಿ ಮಾಡಿದ್ದು ಖುಷಿ ತಂದಿದೆ. ಕರ್ನಾಟಕ ಮತ್ತು ಭಾರತೀಯ ಕ್ರಿಕೆಟ್‌ಗೆ ಅಪಾರವಾದ ಕೊಡುಗೆ ನೀಡಿದ ಹೆಮ್ಮೆಯ ಹೆಮ್ಮೆಯ ಕನ್ನಡಿಗನೊಂದಿಗೆ ಸಂವಾದದಲ್ಲಿ ತೊಡಗಿಸಿಕೊಂಡಿದ್ದು ಸಂತಸವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ
ಇನ್ನೂ ಡಿಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದ ಅನಿಲ್ ಕುಂಬ್ಳೆ, ವೈಯುಕ್ತಿಕ ಕೆಲಸದ ನಿಮಿತ್ತ ಡಿಸಿಎಂ ಭೇಟಿ ಆಗಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಕಾಫಿ ತೋಟದ ಸೊಬಗಿಗೆ ಮಾರುಹೋದ ಬ್ಯಾಡ್ಮಿಂಟರ್ ತಾರೆ – ಪಿವಿ ಸಿಂಧುಗೆ ಕೊಡಗಿನಲ್ಲಿ ಕಾಫಿ ತೋಟ ಖರೀದಿಸುವಾಸೆ!
ಅಲ್ಲದೇ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಪಂದ್ಯಗಳ ಕುರಿತು ಮಾತನಾಡಿ, ಆರ್‌ಸಿಬಿ ಹೀಗೇ ಆಡಲಿ, ಇನ್ನೂ ಅರ್ಧ ಕೂಡ ಟೂರ್ನಿ ಆಗಿಲ್ಲ. ಆರ್‌ಸಿಬಿ ಇನ್ನೂ ಬೆಂಗಳೂರಿನಲ್ಲಿ ಪಂದ್ಯ ಗೆದ್ದಿಲ್ಲ, ಆದ್ರೆ ಪ್ರದರ್ಶನ ನೋಡಿದ್ರೆ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುವ ನಿರೀಕ್ಷೆ ಇದ್ದೇ ಇದೆ. ಇವತ್ತಿನ ಮ್ಯಾಚ್ ಗೆ ಆಲ್ ದಿ ಬೆಸ್ಟ್ ಹೇಳುವೆ, ನಾನು ಪಂಜಾಬ್ ಹಾಗೂ ಬೆಂಗಳೂರು ಎರಡೂ ತಂಡದಲ್ಲಿ ಇದ್ದೆ. ಅದೇ ಸಮಸ್ಯೆ ನನಗೆ ಎಂದು ಮುಗುಳುನಕ್ಕರು. ಇದನ್ನೂ ಓದಿ: ಲೇಸರ್ ಲೈಟ್ ಎಫೆಕ್ಟ್, ಪಾಟ್ನಾ ಏರ್‌ಪೋರ್ಟ್‌ನಲ್ಲಿ ತಪ್ಪಿತು ದುರಂತ – ಪೈಲಟ್ ಸಾಹಸದಿಂದ ಉಳಿಯಿತು ನೂರಾರು ಜೀವ