ಬೆಂಗಳೂರು: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ (CET Exam) ಅವಕಾಶ ಕೊಡದ ಪ್ರಕರಣವನ್ನ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಖಂಡಿಸಿದ್ದಾರೆ.
ಘಟನೆ ಬಗ್ಗೆ ಜೆಪಿ ಭವನದಲ್ಲಿ ಮಾತನಾಡಿದ ಅವರು, ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ.ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ?ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ?ಜನಿವಾರ ಇದ್ದರೆ ಏನು ಸಮಸ್ಯೆ ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಜಾತಿಗಣತಿ ವರದಿ ಚರ್ಚೆಗೆ ಕೂಡಲೇ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆಯಬೇಕು: ನಿಖಿಲ್ ಕುಮಾರಸ್ವಾಮಿ
ಸ್ಮಾರ್ಟ್ ವಾಚ್, ಎಲೆಕ್ಟ್ರಿಕ್ ವಸ್ತು ಅಂತಹದ್ದನ್ನ ಬೇಕಿದ್ರೆ ನೀವು ತೆಗೆಸಬೇಕು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆಗೆ ಕಾರಣವಾಗಿರೋರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮವಹಿಸಬೇಕು ಅಂತ ಆಗ್ರಹ ಮಾಡಿದರು. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ಎಷ್ಟಿದೆ? – ವಿವಾದ ಹುಟ್ಟಿಕೊಂಡಿದ್ದು ಯಾವಾಗ?