ಜೈಪುರ: ತಾನು ಎದುರಿಸಿದ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸುವ ಮೂಲಕ ರಾಜಸ್ಥಾನ (Rjasthan Royals) 14 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ (Vaibhav Suryavanshi) ಐಪಿಎಲ್‌ನಲ್ಲಿ ದಾಖಲೆ ಬರೆದಿದ್ದಾರೆ.
14 ವರ್ಷ, 23 ದಿನಗಳ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯವಂಶಿ ಪಾತ್ರವಾಗಿದ್ದಾರೆ. ಇದರ ಜೊತೆ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ ಕಿರಿಯ ಆಟಗಾರ ಎಂಬ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ನಾಯಕ ಸಂಜು ಸಾಮ್ಸನ್ ಗಾಯಗೊಂಡ ಹಿನ್ನೆಲೆಯಲ್ಲಿ ಲಕ್ನೋ (Lucknow Super Giants) ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಓಪನರ್ ಆಗಿ ಆಗಮಿಸಿದ ಸೂರ್ಯವಂಶಿ ಅವರು ಮೊದಲ ಓವರ್ ಎಸೆದ ಶಾರ್ದೂಲ್ ಠಾಕೂರ್ ಅವರ ಮೂರನೇ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದ್ದರು.
ಈ ಪಂದ್ಯದಲ್ಲೇ ಸ್ಫೋಟಕ ಆಟ ಪ್ರದರ್ಶಿಸಿದ ಸೂರ್ಯವಂಶಿ 34 ರನ್ ರನ್ (20 ಎಸೆತ, 2 ಬೌಂಡರಿ, 3 ಸಿಕ್ಸ್) ಸಿಡಿಸಿ ಔಟಾದರು. ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್ ಜೊತೆ 52 ಎಸೆತಗಳಲ್ಲಿ 85 ರನ್ ಜೊತೆಯಾಟವಾಡಿದ್ದರು. ಔಟಾಗಿ ಪೆವಿಲಿಯನ್ ಕಡೆಗೆ ಹೋಗವಾಗ ಸೂರ್ಯವಂಶಿ ಕಣ್ಣೀರು ಹಾಕುತ್ತಾ ಹೆಜ್ಜೆ ಹಾಕಿದರು.
𝐌𝐀𝐊𝐈𝐍𝐆. 𝐀. 𝐒𝐓𝐀𝐓𝐄𝐌𝐄𝐍𝐓 🫡
Welcome to #TATAIPL, Vaibhav Suryavanshi 🤝
Updates ▶️ https://t.co/02MS6ICvQl#RRvLSG | @rajasthanroyals pic.twitter.com/MizhfSax4q
— IndianPremierLeague (@IPL) April 19, 2025
ಐಪಿಎಲ್ ಹರಾಜಿನಲ್ಲಿ ಸೂರ್ಯವಂಶಿಯನ್ನು ರಾಜಸ್ಥಾನ ರಾಯಲ್ಸ್ 1.1 ಕೋಟಿ ರೂ. ನೀಡಿ ಖರೀದಿಸಿತ್ತು.
5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.
2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದರು.
ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಇದರಿಂದಲೇ ವೈಭವ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.