ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

Public TV
1 Min Read
narendra modi 1

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು (Terror Attack) ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ. ಈ ದಾಳಿಯ ಬಗ್ಗೆ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಈ ಹೇಯ ಕೃತ್ಯದ ಹಿಂದಿರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಪೋಸ್ಟ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!

ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ. ಈ ಹೇಯ ಕೃತ್ಯದ ಹಿಂದಿರುವ ಉಗ್ರರನ್ನು ಸುಮ್ಮನೆ ಬಿಡಲ್ಲ. ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಮಾಯಕ ನಾಗರಿಕರ ಮೇಲಿನ ದಾಳಿ ಹೇಡಿತನ ಮತ್ತು ಅತ್ಯಂತ ಖಂಡನೀಯವಾದದ್ದು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮುಗ್ಧರನ್ನು ಕೊಲ್ಲುವುದು ದುಷ್ಟತನ – ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

Share This Article