ಶ್ರೀನಗರ: ಉಗ್ರರ ದಾಳಿಗೆ (Terrorist Attack) ಮತ್ತೊಬ್ಬ ಕನ್ನಡಿಗ ಬಲಿಯಾಗಿದ್ದಾರೆ. ಮೃತರನ್ನು ಬೆಂಗಳೂರಿನ ಮತ್ತಿಕೆರೆ ಮೂಲದ ಭರತ್ ಭೂಷಣ್ ಎಂದು ಗುರುತಿಸಲಾಗಿದೆ. ಫೈರಿಂಗ್ ಆಗುತ್ತಿದ್ದಂತೆ ಮರದ ಬಳಿ ಮಗು ಪತ್ನಿ ಜೊತೆ ಅವಿತು ಕುಳಿತಿದ್ದರು. ಅವರ ಮೇಲೆ ದೂರದಿಂದಲೇ ಉಗ್ರರು ಫೈಯರ್ ಮಾಡಿದ್ದಾರೆ. ಈ ವೇಳೆ ಭೂಷಣ್ ತಲೆಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ.
ಭರತ್ ಅವರು ಮಾಜಿ ಸ್ಪೀಕರ್ ಕೆ. ಬಿ. ಕೋಳಿವಾಡ ಅವರ ಅಳಿಯನ ಸ್ನೇಹಿತ ಎಂದು ತಿಳಿದು ಬಂದಿದೆ. ಇದಕ್ಕೂ ಮೊದಲು ದಾಳಿಯಲ್ಲಿ ಶಿವಮೊಗ್ಗ (Shivamogga) ಮೂಲದ ಉದ್ಯಮಿ ಮಂಜುನಾಥ್ ಎಂಬವರು ಸಾವಿಗೀಡಾಗಿದ್ದರು.
ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 27 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ – 27ಕ್ಕೂ ಹೆಚ್ಚು ಪ್ರವಾಸಿಗರು ಬಲಿ?
ಮಧ್ಯಾಹ್ನದ ವೇಳೇ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲು ಪ್ರದೇಶದಲ್ಲಿ ಕುದುರೆ ಮೇಲೆ ಕುಳಿತು ಪ್ರವಾಸಿಗರು ಸಮಯ ಕಳೆಯುತ್ತಿದ್ದ ವೇಳೆ, ಪ್ರವಾಸಿಗರನ್ನು ಮಾತನಾಡಿಸುವ ನೆಪದಲ್ಲಿ ಬಂದು ಉಗ್ರರು ಗುಂಡು ಹಾರಿಸಿದ್ದರು.
ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯಾ ಪ್ರಾರಂಭಿಸಿವೆ. ಇದನ್ನೂ ಓದಿ: ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ