ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಉಗ್ರರ ಪೈಶಾಚಿಕ ಕೃತ್ಯಕ್ಕೆ 27 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹೇಯ ಕೃತ್ಯದ ಬಗ್ಗೆ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಖಂಡಿಸಿದ್ದಾರೆ. ಇದನ್ನೂ ಓದಿ:ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್
ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದು ಶಿವಣ್ಣ (Shivarajkumar) ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು
Shocked and saddened by the terror attack in Pahalgam. Such incidents have no place in our society and should be strongly condemned.
My prayers are with the families of those affected.
— Ram Charan (@AlwaysRamCharan) April 22, 2025
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಆಘಾತ ಮತ್ತು ದುಃಖವಾಗಿದೆ. ಇಂತಹ ಘಟನೆಗಳಿಗೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅವುಗಳನ್ನು ಬಲವಾಗಿ ಖಂಡಿಸಬೇಕು. ಸಂತ್ರಸ್ತರ ಕುಟುಂಬದ ಪರವಾಗಿ ರಾಮ್ ಚರಣ್ ಬರೆದುಕೊಂಡಿದ್ದಾರೆ.
ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna) ರಿಯಾಕ್ಟ್ ಮಾಡಿ, ನನ್ನ ಹೃದಯ ಒಡೆದಿದೆ ಎಂದು ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ನೋವಾಗಿದೆ. ಅವರ ಕುಟುಂಬಗಳಿಗೆ ಹೃದಯಪೂರ್ವಕ ಪ್ರಾರ್ಥನೆ ಮತ್ತು ಸಂತಾಪಗಳು. ಇದು ಎಂದಿಗೂ ಮರೆಯಲಾಗದ ಘೋರ ದಾಳಿ ಎಂದು ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ (Anushka Sharma) ಪ್ರತಿಕ್ರಿಯೆ ನೀಡಿದ್ದಾರೆ.
Om Shanti. 🙏🏻🕉️🙏🏻 condolences.
Shocked and angry . No words to express the anguish. Prayers and strength to the victims . Time we all let go of petty in-house fighting , UNITE and realise the true enemy. https://t.co/zSUIGHo1QP
— Raveena Tandon (@TandonRaveena) April 22, 2025
ಓಂ ಶಾಂತಿ, ನನ್ನ ಕಡೆಯಿಂದ ಸಂತಾಪ ಸೂಚಿಸುತ್ತೇನೆ. ಆಘಾತ ಮತ್ತು ಕೋಪ ಬರುತ್ತಿದೆ. ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ನಾವು ಸಣ್ಣ ಪುಟ್ಟ ಜಗಳಗಳನ್ನು ಬಿಟ್ಟು, ಒಗ್ಗೂಡಿ ನಿಜವಾದ ಶತ್ರುಗಳನ್ನು ಅರಿತುಕೊಳ್ಳುವ ಸಮಯ ಎಂದು ರವೀನಾ ಟಂಡನ್ ಬರೆದುಕೊಂಡಿದ್ದಾರೆ.
They killed our people in cold blood. This can’t be forgiven, these terrorists need to know we are not staying quiet. We need to retaliate, I request our Prime Minister @narendramodi ji, Home Minister @AmitShah ji and Defence Minister @rajnathsingh ji to give them what they…
— Sanjay Dutt (@duttsanjay) April 22, 2025
ಸಂಜಯ್ ದತ್ (Sanjay Dutt) ಎಕ್ಸ್‌ನಲ್ಲಿ, ಅವರು ನಮ್ಮ ಜನರನ್ನು ರಕ್ತದಲ್ಲಿ ಕೊಂದಿದ್ದಾರೆ. ಇದನ್ನೂ ಕ್ಷಮಿಸಲು ಸಾಧ್ಯವಿಲ್ಲ. ನಾವು ಪ್ರತಿಕಾರ ತೀರಿಸಿಕೊಳ್ಳಬೇಕು. ನಮ್ಮ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರು ಹೈಯ ಕೃತ್ಯ ಮಾಡಿದವರಿಗೆ ಅರ್ಹವಾದದ್ದನ್ನು ನೀಡಬೇಕೆಂದು ನಾನು ವಿನಂತಿಸುತ್ತೇನೆ.
They killed our people in cold blood. This can’t be forgiven, these terrorists need to know we are not staying quiet. We need to retaliate, I request our Prime Minister @narendramodi ji, Home Minister @AmitShah ji and Defence Minister @rajnathsingh ji to give them what they…
— Sanjay Dutt (@duttsanjay) April 22, 2025
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಾಗರಿಕ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಈ ಹೇಯ ಕೃತ್ಯವು ಸ್ವೀಕಾರಾರ್ಹವಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.