ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪಹಲ್ಗಾಮ್‌ನಲ್ಲಿ (Pahalgam Attack) ಉಗ್ರರಿಂದ ಹತ್ಯೆಯಾದ ನಗರದ ಭರತ್ ಭೂಷಣ್ (Bharath Bhushan) ಅವರ ಅಂತಿಮ ದರ್ಶನ ಪಡೆದರು.
ಸಿಎಂ ಭೇಟಿಯ ವೇಳೆ, ಮಗುವನ್ನು ತೋರಿಸಿ ಘಟನೆಯ ಭೀಕರತೆಯನ್ನು ಹೇಳಿ ಭರತ್ ಪತ್ನಿ ಸುಜಾತ ಅವರು ಕಣ್ಣಿರಿಟ್ಟರು. ಸಿಎಂ ಮುಂದೆ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದು, ಮಗುವಿನ ಮುಖ ನೋಡಿ ಸಿಎಂ ಸಹ ಭಾವುಕರಾದರು. ಭರತ್ ಪತ್ನಿ, ಸೋದರಮಾವ ಸೀತಾರಾಮ್ ಹಾಗೂ ಭರತ್ ತಂದೆಯವರಿಗೆ ಸಿಎಂ ಸಾಂತ್ವನ ಹೇಳಿದರು. ಇದನ್ನೂ ಓದಿ: ಜೆಪಿ ಪಾರ್ಕ್ ವಾರ್ಡ್‌ನಲ್ಲಿರುವ ಉದ್ಯಾನವನಕ್ಕೆ ಭರತ್ ಭೂಷಣ್ ಹೆಸರು
ಸಿದ್ದರಾಮಯ್ಯ ಅವರ ಜೊತೆ ಸಚಿವ ರಾಮಲಿಂಗಾರೆಡ್ಡಿಯವರು ಸಹ ಭರತ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಬೆಳಗ್ಗೆ 5:30ರ ವೇಳೆಗೆ ಭರತ್ ಭೂಷಣ್ ಮೃತದೇಹ ಸುಂದರ ನಗರಕ್ಕೆ ಆಗಮಿಸಿತು. ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ, ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಭರತ್ ಭೂಷಣ್ ನಿವಾಸದ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಎಂ ಜೊತೆ ಹಲವು ಗಣ್ಯರು ಆಗಮನ ಹಿನ್ನೆಲೆ ವಿವಿಐಪಿ ದರ್ಶನದ ವ್ಯವಸ್ಥೆ ಕೂಡ ಮಾಡಲಾಗಿದೆ.
ಭರತ್ ಸ್ಮರಣೆಗಾಗಿ ಪಾರ್ಕ್‌ಗೆ ಭರತ್ ಭೂಷಣ್ ಪಾರ್ಕ್ (Bharath Bhushan Park) ಎಂದು ನಾಮಕರಣ ಮಾಡಲಾಗಿದೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಬರುವ ವಾರ್ಡ್‌ನ ಪಾರ್ಕ್ ಇದಾಗಿದ್ದು, ಭರತ್ ಭೂಷಣ್ ನಿವಾಸದ ಬಳಿ ಇದೆ. ಅಲ್ಲದೇ ಭರತ್ ಭೂಷಣ್ ಇದೇ ಪಾರ್ಕ್‌ನಲ್ಲಿ ಪ್ರತಿದಿನ ವಾಕಿಂಗ್ ಮಾಡುತ್ತಿದ್ದರು. ಪಾರ್ಕ್ ಒಳಗಿನ ಸಬಾಂಗಣದಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ಭರತ್ ಅದರಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು. ಈಗ ಭರತ್ ಸ್ಮರಣೆಗಾಗಿ ಶಾಸಕ ಮುನಿರತ್ನ (Muniratna) ಅವರು ಭರತ್ ಹೆಸರನ್ನೇ ಪಾರ್ಕ್‌ಗೆ ನಾಮಕರಣ ಮಾಡಿದ್ದಾರೆ. ಇದನ್ನೂ ಓದಿ: Pahalgam Terror Attack: ಶಿವಮೊಗ್ಗ ತಲುಪಿದ ಮಂಜುನಾಥ್ ಮೃತದೇಹ