ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ಪಾಕಿಸ್ತಾನದಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ವಾಪಸ್ ಆಗುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆ ಪಾಕಿಸ್ತಾನದಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ವಾಪಸ್ ಆಗುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ.
ಕೇಂದ್ರ ಸರ್ಕಾರ ಭಾರತೀಯ ನಾಗರಿಕರು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಮತ್ತು ಪಾಕಿಸ್ತಾನದಲ್ಲಿರುವವರು ಆದಷ್ಟು ಬೇಗ ಭಾರತಕ್ಕೆ ಮರಳುವಂತೆ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿ ತೆಗೆದುಕೊಂಡಿದ್ದರು. ದಾಳಿಯ ನಂತರ ಭಾರತ ಸಂಪುಟ ಸಮಿತಿ ಸಭೆ ನಡೆಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಕ್ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳು ಏ.27 ರಿಂದ ರದ್ದಾಗಲಾಗಿದ್ದು, ಅವರಿಗೆ 48 ಗಂಟೆಗಳಲ್ಲಿ ಭಾರತವನ್ನು ತೊರೆಯುವಂತೆ ಸೂಚಿಸಲಾಗಿತ್ತು.
ಪಾಕ್ ಪ್ರಜೆಗಳಿಗೆ ಈ ಹಿಂದೆ ನೀಡಲಾದ ವೈದ್ಯಕೀಯ ವೀಸಾಗಳು ಏ.29 ರವರೆಗೆ ಮಾತ್ರ ಮಾನ್ಯವಾಗಿರುತ್ತವೆ. ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳು ತಮ್ಮ ವೀಸಾ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯುವಂತೆ ಸೂಚಿಸಲಾಗಿದೆ. ಅಲ್ಲದೇ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ.