ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಪಾಕ್ ವಿರುದ್ಧ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆ (All-party meeting) ನಡೆಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರ ಅಧ್ಯಕ್ಷತೆಯಲ್ಲಿ ಸಭೆ ಶುರುವಾಗಿದೆ. ಸಭೆ ಆರಂಭಿಸವುದಕ್ಕೂ ಮುನ್ನ ಉಗ್ರರ ಗುಂಡಿಗೆ ಬಲಿಯಾದವರಿಗೆ ಸಂತಾಪ ಸೂಚಿಸಲಾಯಿತು.
#WATCH | Delhi: All-party meeting called by the Central Government underway at the Parliament Annexe building
Union HM Amit Shah, Defence Minister Rajnath Singh, EAM Dr S Jaishankar are also present
#PahalgamTerroristAttack pic.twitter.com/Ntt27DETDo
— ANI (@ANI) April 24, 2025
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು, ಜೆ.ಪಿ ನಡ್ಡಾ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಸಭೆಗೂ ಮುನ್ನ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಜೆ.ಪಿ ನಡ್ಡಾ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಿ ಉಗ್ರರ ದಾಳಿಯ ಕುರಿತು ಮಾಹಿತಿ ನೀಡಿದ್ದರು. ಇದನ್ನೂ ಓದಿ: ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ
ಇಂದಿನ ಸಭೆಯಲ್ಲಿ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಬುಧವಾರ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಅಮಿತ್ ಶಾ ಹಾಗೂ ರಾಜನಾಥ್ ಸಿಂಗ್ ಸಭೆಗೆ ಮಾಹಿತಿ ನೀಡಲಿದ್ದಾರೆ. ಜೊತೆಗೆ ಮುಂದಿನ ನಿರ್ಣಯಗಳ ಕುರಿತು ಸರ್ವಪಕ್ಷ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಇದನ್ನೂ ಓದಿ: Pahalgam Terrorist Attack | ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಭರತ್ ಭೂಷಣ್ ಅಂತ್ಯಕ್ರಿಯೆ
#WATCH | Delhi: A two-minute silence was observed during the all-party meeting called by the Central Government to honour the innocent lives lost in the Pahalgam terror attack pic.twitter.com/0Hf5XPcedK
— ANI (@ANI) April 24, 2025
26 ಮಂದಿ ಬಲಿ
ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಮಂಗಳವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು, ವಿದೇಶಿಯರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿ ನಡೆಸಿದ ಭೀಕರ ದಾಳಿ ಇದಾಗಿದೆ. ಇದುವರೆಗೂ ಭದ್ರತಾಪಡೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದ ಉಗ್ರರು, ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಅಮಾಯಕ ಪ್ರವಾಸಿಗರನ್ನು ಟಾರ್ಗೆಟ್ ಮಾಡಿದ್ದಾರೆ. ಆ ಮೂಲಕ ಕಣಿವೆಯಲ್ಲಿ ಆತಂಕ, ಭಯದ ವಾತಾವರಣ ಮರುಕಳಿಸಿದೆ. ಅದರಲ್ಲೂ ಪುರುಷನ್ನೇ ಗುರಿಯಾಗಿಸಿಕೊಂಡು, ನೀನು ಹಿಂದೂನಾ, ಮುಸ್ಲಿಮನಾ? ಅಂತ ಖಚಿತಪಡಿಸಿಕೊಂಡು ಕೊಲ್ಲಲಾಗಿದೆ. ಇದನ್ನೂ ಓದಿ: ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್