– ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ; ಶಾಸಕ
ರಾಮನಗರ: ಜಮ್ಮು-ಕಾಶ್ಮೀರ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕಷ್ಣ (HC Balakrishna) ಹೇಳಿದ್ದಾರೆ.
ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿಕೆಗೆ ಸಹಮತ ವ್ಯಕ್ತಪಡಿಸುತ್ತೇನೆ. ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಯಾವ ಸರ್ಕಾರ ಅಧಿಕಾರದಲ್ಲಿ ಇರುತ್ತೋ ಅದೇ ಸರ್ಕಾರ ಹೊಣೆ ಹೊರಬೇಕು. ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ಫೆಲ್ಯೂರ್ ಆಗಿದೆ. ಹಾಗಾಗಿ ಅಮಾಯಕರು ಬಲಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯದಿಂದ ತಲಾ 1 ಲಕ್ಷ ಪರಿಹಾರ
ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ನೀಡಬೇಕಿತ್ತು. ಕೆಂದ್ರದಲ್ಲಿ ಅಧಿಕಾರ ನಡೆಸುವವರೇ ಇದಕ್ಕೆ ಜವಾಬ್ದಾರಿ. ಮೃತರ ಕುಟುಂಬಕ್ಕೆ ಇಡೀ ರಾಜ್ಯ ಸರ್ಕಾರ ಸಾಂತ್ವನ ಹೇಳಿದೆ. ಸಿಎಂ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಣೆ ಮಾಡಿದ್ದಾರೆ. ನಾವು ನಮ್ಮ ಕೆಲಸ ಮಾಡಿದ್ದೇವೆ. ಯಾರು ಅಮಾಯಕರ ರಕ್ಷಣೆ ಮಾಡಬೇಕಿತ್ತೋ ಅವರು ಮಾಡಿಲ್ಲ ಎಂಬುದು ದೂರು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: Pahalgam Terrorist Attack | ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್, ಖರ್ಗೆ ಭಾಗಿ
ಕೇಂದ್ರ ಗೃಹ ಮಂತ್ರಿಗಳು ಈಗ ಆ ಜಾಗಕ್ಕೆ ಹೋದ್ರೆ ಸತ್ತವರು ಬದುಕಿ ಬರೋಲ್ಲ. ಘಟನೆ ನಡೆಯದ ಹಾಗೆ ತಡೆಯುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಮುಗಿದ ಮೇಲೆ ಸಾಂತ್ವನ ಎಲ್ಲರೂ ಹೇಳುತ್ತಾರೆ. ಘಟನೆ ನಡೆಯುವ ಮುನ್ನವೇ ಮಿಲಿಟರಿ ನಿಯೋಜನೆ ಮಾಡಬೇಕಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಹೇಗೆ ಕಾರ್ಯ ನಿರ್ವಹಣೆಯ ಮಾಡಬೇಕೆಂದು ಕೇಂದ್ರಕ್ಕೆ ಗೊತ್ತಿರಲಿಲ್ವಾ? ಎಂದು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ