– ಪಾಕ್ ಸೇನಾ ವಾಹನವೂ ಫಿನೀಶ್
ಇಸ್ಲಾಮಾಬಾದ್: ಬಲೂಚಿಸ್ತಾನದ ಕ್ವೆಟ್ಟಾ ಬಳಿಯ ಮಾರ್ಗತ್ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯ ಮೇಲೆ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿ ನಡೆಸಿದ್ದು, ಪಾಕ್ ಸೇನೆಯ 10 ಸಿಬ್ಬಂದಿಯನ್ನು ಹತ್ಯೆ ಮಾಡಿದೆ.
ಬಲೂಚ್ ದಂಗೆಕೋರರಿಂದ ಪಾಕ್ ಸೇನೆಯ ಸುಬೇದಾರ್ ಶೆಹಜಾದ್ ಅಮೀನ್, ನಯಬ್ ಸುಬೇದಾರ್ ಅಬ್ಬಾಸ್, ಸಿಪಾಯಿ ಖಲೀಲ್, ಸಿಪಾಯಿ ಜಾಹಿದ್, ಸಿಪಾಯಿ ಖುರ್ರಂ ಮತ್ತು ಇತರರು ಹತ್ಯೆಗೀಡಾಗಿದ್ದಾರೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ – ಜಮ್ಮು ಸರ್ಕಾರ ಅಲರ್ಟ್; ವೈದ್ಯಕೀಯ ಸಿಬ್ಬಂದಿ ರಜೆ ರದ್ದು
ಗುಂಪಿನ ವಕ್ತಾರ ಜೀಯಂಡ್ ಬಲೂಚ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ರಿಮೋಟ್-ನಿಯಂತ್ರಿತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಈ ದಾಳಿ ನಡೆಸಲಾಗಿದ್ದು, ಆಕ್ರಮಿತ ಪಾಕಿಸ್ತಾನಿ ಸೇನೆಯ 10 ಸಿಬ್ಬಂದಿ ಸಾವನ್ನಪ್ಪಿದ್ದಾರೆ.
‘ಕ್ವೆಟ್ಟಾದ ಉಪನಗರವಾದ ಮಾರ್ಗತ್‌ನಲ್ಲಿ ಬಲೂಚ್ ಲಿಬರೇಶನ್ ಆರ್ಮಿ ಸ್ವಾತಂತ್ರ‍್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ರಿಮೋಟ್ ಕಂಟ್ರೋಲ್ಡ್ ಐಇಡಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ, ಶತ್ರು ವಾಹನವನ್ನು ಸಂಪೂರ್ಣವಾಗಿ ನಾಶಗೊಂಡಿದೆ. ಅದರಲ್ಲಿದ್ದ ಎಲ್ಲಾ 10 ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಜೀಯಂಡ್ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ʻಒಂದು ಹನಿ ನೀರುʼ ಕೂಡ ಹರಿಸಲ್ಲ; 3 ಅಂಶಗಳ ಕಾರ್ಯತಂತ್ರ ರೂಪಿಸಲು ಕೇಂದ್ರ ಸೂಚನೆ
‘ಆಕ್ರಮಣಶೀಲ ಶತ್ರು ಸೈನ್ಯ’ ಎಂದು ವಿವರಿಸುವ ವಿರುದ್ಧ ನಡೆಯುತ್ತಿರುವ ಸಶಸ್ತ್ರ ಪ್ರತಿರೋಧದ ಭಾಗವಾಗಿ ಈ ದಾಳಿ ನಡೆದಿದೆ ಎಂದು ಬಿಎಲ್‌ಎ ಹೇಳಿದೆ. ಅಂತಹ ಕಾರ್ಯಾಚರಣೆಗಳು ತೀವ್ರತೆಯೊಂದಿಗೆ ಮುಂದುವರಿಯುತ್ತವೆ ಎಂದು ಎಚ್ಚರಿಸಿದೆ. ಸೇನೆಯ ಬಾಂಬ್ ನಿಷ್ಕ್ರಿಯ ಘಟಕಕ್ಕೆ ಸೇರಿದೆ ಎಂದು ಹೇಳಲಾದ ಮಿಲಿಟರಿ ವಾಹನದಿಂದ ದಟ್ಟವಾದ ಕಪ್ಪು ಹೊಗೆ ಹೊರಸೂಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಬಿಎಲ್‌ಎ ಬಿಡುಗಡೆ ಮಾಡಿದೆ.