– ಐವರಿಗೆ ಗಂಭೀರ ಗಾಯ
ನವದೆಹಲಿ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಯ (Delhi-Mumbai Expressway) ಒಂದು ಭಾಗವನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ವಚ್ಛತಾ ಸಿಬ್ಬಂದಿ (Sanitation Workers) ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ನುಹ್ ಹರಿಯಾಣದ (Nuh Haryana) ಫಿರೋಜ್‌ಪುರ್ ಝಿರ್ಕಾದ ಇಬ್ರಾಹಿಂ ಬಾಸ್ ಗ್ರಾಮದ ಬಳಿ ನಡೆದಿದೆ.
ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಪಿಕಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಆರು ಮಹಿಳೆಯರು ಸಾವನ್ನಪ್ಪಿದ್ದು, ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಡು ರಸ್ತೆಯಲ್ಲೇ ಕಾರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿ ಮಹಿಳೆಯ ದರ್ಪ
ಪ್ರಾಥಮಿಕ ತನಿಖೆಯ ಪ್ರಕಾರ, ಸಾವನ್ನಪ್ಪಿದ ಕಾರ್ಮಿಕರಲ್ಲಿ ಐದು ಮಂದಿ ಖೇರಿ ಕಲಾನ್ ಗ್ರಾಮಕ್ಕೆ ಸೇರಿದವರು ಮತ್ತು ಒಬ್ಬರು ಜಿಮ್ರಾವತ್ ಗ್ರಾಮಕ್ಕೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ: ಸಿದ್ದರಾಮಯ್ಯ
ದೆಹಲಿಯಿಂದ ಅಲ್ವಾರ್ ಕಡೆಗೆ ವೇಗವಾಗಿ ಹೋಗುತ್ತಿದ್ದ ಪಿಕಪ್ ನಿಯಂತ್ರಣ ತಪ್ಪಿ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: AIಯೇ ಅಂತಿಮ ಅಲ್ಲ: ಹೆಚ್.ಆರ್.ರಂಗನಾಥ್