ಶ್ರೀನಗರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ (Pahalgam Terrorist Attack) ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ.
ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ತಡೆಯಲು ಸಾಧ್ಯನಾ? – ಜಲತಜ್ಞ ರಾಜಾರಾವ್ ಹೇಳಿದ್ದೇನು?
ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್‌ಐಎ ತಂಡ ಈಗಾಗಲೇ ಪಹಲ್ಗಾಮ್ ತಲುಪಿದೆ, ದಾಳಿ ನಡೆದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. ಜೊತೆಗೆ ತನಿಖಾ ಏಜೆನ್ಸಿಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು ಸ್ಥಳದಲ್ಲಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸುವಲ್ಲಿ ನಿರತವಾಗಿದೆ. ಮತ್ತೊಂದೆಡೆ ಸ್ಥಳೀಯ ಪೊಲೀಸರಿಂದ ಪ್ರಕರಣದ ಡೈರಿ, ಎಫ್‌ಐಆರ್ ಮತ್ತು ಈ ವಿಷಯಕ್ಕೆ ಸಂಬಂಧಿಸಿದ ಇತರ ಪ್ರಮುಖ ದಾಖಲೆಗಳನ್ನ ಸುಪರ್ಧಿಗೆ ಪಡೆದುಕೊಳ್ಳಲು NIA ಮುಂದಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ನೌಕಾಪಡೆ ಅಧಿಕಾರಿಯ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಘೋಷಣೆ
ಉಗ್ರರ ದಾಳಿಗೆ 26 ಮಂದಿ ಬಲಿ
ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಜನಪ್ರಿಯ ಪ್ರವಾಸಿತಾಣ ಪಹಲ್ಗಾಮ್‌ನಲ್ಲಿ ಏ.22ರಂದು ಉಗ್ರರು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಕನ್ನಡಿಗರು, ವಿದೇಶಿಯರು ಸೇರಿ 26 ಮಂದಿ ಬಲಿಯಾಗಿದ್ದಾರೆ. 2019ರಲ್ಲಿ 40 ಮಂದಿ ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಬಳಿಕ ಉಗ್ರರು ಕಣಿವೆಯಲ್ಲಿನಡೆಸಿದ ಭೀಕರ ದಾಳಿ ಇದಾಗಿದೆ. ಇದನ್ನೂ ಓದಿ: ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್ ಗೃಹ ಸಚಿವ