ಶ್ರೀನಗರ: ಪಹಲ್ಗಾಮ್ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭದ್ರತಾ ಪಡೆಗಳ ಸಚ್ಛ ಕಾಶ್ಮೀರ (Jammu Kashmir) ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ. ಉಗ್ರರ ಮನೆಗಳನ್ನು ಹುಡುಕಿ ಹುಡುಕಿ ಧ್ವಂಸ ಮಾಡುತ್ತಿರುವ ಭದ್ರತಾ ಈಗ ಮತ್ತೊಬ್ಬ ಉಗ್ರನ ಮನೆಯನ್ನು (House) ಸ್ಫೋಟಿಸಿದೆ.
ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ ಭಯೋತ್ಪಾದಕ ಜಮೀಲ್ ಅಹ್ಮದ್‌ನ ಮನೆಯನ್ನು ಭದ್ರತಾ ಪಡೆಗಳು ಸ್ಫೋಟಿಸಿವೆ. ಈ ಮೂಲಕ ಕಳೆದ ಮೂರು ದಿನಗಳಲ್ಲಿ 8 ಉಗ್ರರ ಮನೆಗಳನ್ನು ಧ್ವಂಸಗೊಳಿಸಿದಂತಾಗಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಬೆಂಬಲಿಸಿ ಪೋಸ್ಟ್ – ಶಾಸಕ, ಶಿಕ್ಷಕ, ವಕೀಲ ಸೇರಿ 19 ಮಂದಿ ಅರೆಸ್ಟ್
ಕಳೆದ ಮೂರು ದಿನಗಳಲ್ಲಿ ಜಿಲ್ಲಾ ಅಧಿಕಾರಿಗಳೊಂದಿಗೆ, ಭದ್ರತಾ ಪಡೆಗಳು ಕಣಿವೆಯಾದ್ಯಂತ ಹಲವಾರು ಭಯೋತ್ಪಾದಕರ ಆಸ್ತಿಗಳನ್ನು ಧ್ವಂಸಗೊಳಿಸಿವೆ. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ – NIA ಹೆಗಲಿಗೆ ತನಿಖೆಯ ಹೊಣೆ
ಭದ್ರತಾ ಪಡೆಗಳು ಈಗ ಅನುಮಾನ ಬಂವರ ಮನೆಗಳನ್ನು ಹುಡುಕಿ ಶಸ್ತ್ರಸ್ತ್ರ ಪತ್ತೆ ಮಾಡುತ್ತಿದ್ದಾರೆ. ಉಗ್ರರಿಗೆ ಸಹಕಾರ ನೀಡಿದ ಆರೋಪದ ಅಡಿ ನೂರಾರು ಮಂದಿ ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.