ನವದೆಹಲಿ: ಉಗ್ರರ ದಾಳಿ (Pahalgam Terror Attack) ಬಳಿಕ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸಿಆರ್‌ಪಿಎಫ್, ಸೇನೆ ಮತ್ತು ಇತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಮನೆಗಳನ್ನು ಹುಡುಕಿ ಧ್ವಂಸ ಮಾಡುತ್ತಲೇ ಇದೆ. ಈವರೆಗೂ 10ಕ್ಕೂ ಹೆಚ್ಚು ನರರಕ್ಕಸರ ಮನೆಗಳನ್ನು ಛಿದ್ರಛಿದ್ರ ಮಾಡಿದೆ. ವಿವಿಧ ಕಡೆಗಳಲ್ಲಿ ತನಿಖೆಯನ್ನ ಚರುಕುಗೊಳಿಸಿವೆ. ಎನ್‌ಐಎ ಕೂಡ ವಿಚಾರಣೆ ಪ್ರಾರಂಭಿಸಿದೆ. ಈ ಮಧ್ಯೆ ರಕ್ಷಣಾ ಸಚಿವರು ಸೇನಾ ಮುಖ್ಯಸ್ಥರ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಯುದ್ಧ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಮಹತ್ವದ ಸಭೆ ನಡೆಸಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಅನಿಲ್ ಚೌಹಾಣ್ ಜೊತೆ ರಾಜನಾಥ್ ಸಿಂಗ್, ತಮ್ಮ ದೆಹಲಿ ನಿವಾಸದಲ್ಲಿ ಅನೇಕ ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಮೂರು ಸೇನೆಗಳ ಸಾಮರ್ಥ್ಯದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದಾರೆ. ಪಾಕಿಸ್ತಾನದ ವಿರುದ್ಧ ಸೇನೆ ಯಾವ ರೀತಿ ಸಿದ್ಧವಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನ ಪಡೆದಿದ್ದಾರೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್
ಪ್ರಧಾನಿಗೆ ಮಾಹಿತಿ ನೀಡಿದ ರಕ್ಷಣಾ ಸಚಿವ:
ಸಿಡಿಎಸ್ ಅನಿಲ್ ಚೌಹಾಣ್ ಜೊತೆ ಮಹತ್ವದ ಚರ್ಚೆ ನಡೆಸಿದ ರಾಜನಾಥ್ ಸಿಂಗ್, ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾದರು. ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ಬಂದ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ಜೊತೆ ನಡೆದ ಚರ್ಚೆಗಳ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದರು. ಸುಮಾರು 40 ನಿಮಿಷಗಳ ಕಾಲ ಚರ್ಚೆ ನಡೆಸಿ ಉಗ್ರರ ದಾಳಿ, ಮುಂದಿನ ಕ್ರಮದ ಕುರಿತು ಮಾಹಿತಿ ನೀಡಿದ್ದಾರೆ. ಇಷ್ಟೆಲ್ಲಾ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಳೆಎಳೆಯಾಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಪ್ರತೀಕಾರದ ಬಗ್ಗೆ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಸೇನೆಗೆ ಕೇಂದ್ರ ಸರ್ಕಾರದಿಂದ ಯಾವ ಸಹಾಯ ಬೇಕು ಕೇಳಿ ನಾವು ಮಾಡಲು ಸಿದ್ಧರಿದ್ದೇವೆ ಎಂಬ ಧೈರ್ಯ ನೀಡಿದ್ದಾರಂತೆ. ಪಾಕ್ ಸೇನಾ ಮುಖ್ಯಸ್ಥ ಪಾಕಿಸ್ತಾನವನ್ನು ತೊರೆದಿರುವ ಬಗ್ಗೆಯೂ ಚರ್ಚೆ ನಡೆದಿದ್ದು, ಇದರ ನಡುವೆ ಕುತಂತ್ರಿ ಚೀನಾ ಬೆಂಬಲ ಘೋಷಿಸಿದ ಬಗ್ಗೆ ಚರ್ಚೆ ಆಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಫ್ಲೋರಿಡಾದಲ್ಲಿ 2 ದೋಣಿಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ
ಪಹಲ್ಗಾಮ್‌ನಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯ:
ಪಹಲ್ಗಾಮ್ ಬಳಿ ದಾಳಿ ನಡೆದ ದಿನ ಅದೇ ಪ್ರದೇಶದಲ್ಲಿ ಮತ್ತು ಅದೇ ಸಮಯದಲ್ಲಿ ಹುವಾವೇ ಸ್ಯಾಟಲೈಟ್ ಫೋನೊಂದು ಸಕ್ರಿಯವಾಗಿದ್ದ ವಿಚಾರ ರಾಷ್ಟ್ರೀಯ ತನಿಖೆ ದಳದ ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. ಭಾರತದಲ್ಲಿ ಚೀನಾ ನಿರ್ಮಿತ ಹುವಾವೇ ಕಂಪನಿ ಸಾಧನ ಬಳಕೆಗೆ ನಿರ್ಬಂಧ ಇದೆ. ಹೀಗಿದ್ದರೂ ದಾಳಿ ನಡೆದ ಪ್ರದೇಶದಲ್ಲಿ ಏಕೈಕ ಹುವಾವೇ ಸ್ಯಾಟಲೈಟ್ ಫೋನ್ ಸಕ್ರಿಯವಾಗಿತ್ತು ಎಂಬ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ಪ್ಯಾಂಟ್ ಬಿಚ್ಚಿಸಿದ್ರು, ಮತ್ತೊಂದು ಬಿಚ್ಚಿಸಿದ್ರು ಅನ್ನೋದು ನನ್ಗೆ ಗೊತ್ತಿಲ್ಲ: ಆರ್.ಬಿ ತಿಮ್ಮಾಪೂರ
ಉಗ್ರರ ಕೃತಕ್ಕೆ ಜಮ್ಮು-ಕಾಶ್ಮೀರ ಸಿಎಂ ಖಂಡನೆ:
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಜಮ್ಮು-ಕಾಶ್ಮೀರ ಸಿಎಂ ಖಂಡಿಸಿದ್ದಾರೆ. 21 ವರ್ಷಗಳ ಬಳಿಕ ಭೀಕರ ದಾಳಿ ನಡೆದಿದೆ. ಉಗ್ರರ ಈ ಹೇಯ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಅಮಾಯಕ ಪ್ರವಾಸಿಗರ ಹತ್ಯೆ ಮಾಡಿದ್ದಾರೆ. ಇದು ನಿಜಕ್ಕೂ ನೋವು ತರಿಸಿದೆ. ನಮ್ಮ ಸರ್ಕಾರ ಈ ಕೃತ್ಯವನ್ನು ಸಹಿಸಲ್ಲ ಎಂದು ವಿಶೇಷ ಅಧಿವೇಶನದಲ್ಲಿ ಗುಡುಗಿದ್ದಾರೆ. ಇದನ್ನೂ ಓದಿ: ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? – ಸಿಎಂ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ