‘ಪಠಾಣ್’ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಬಗ್ಗೆ ಫ್ಯಾನ್ಸ್‌ಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಮಗುವಿನ ಆರೈಯಲ್ಲಿ ಬ್ಯುಸಿಯಾಗಿದ್ದ ದೀಪಿಕಾ ಮತ್ತೆ ಕ್ಯಾಮೆರಾ ಮುಂದೆ ಬರಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ
ಕಳೆದ ಸೆಪ್ಟೆಂಬರ್‌ನಲ್ಲಿ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದ್ದರು. ಈ ಹಿನ್ನೆಲೆ ನಟನೆಯಿಂದ ದೀಪಿಕಾ ಬ್ರೇಕ್ ಪಡೆದುಕೊಂಡಿದ್ದರು. ಇದೀಗ ಮತ್ತೆ ಶಾರುಖ್ ಖಾನ್ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗಿದೆ. ಹೀಗೊಂದು ಸುದ್ದಿ ಇದೀಗ ಹರಿದಾಡುತ್ತಿದೆ. ಇದನ್ನೂ ಓದಿ:ಪ್ರಶಾಂತ್ ನೀಲ್, ಜ್ಯೂ.ಎನ್‌ಟಿಆರ್ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್
ಶಾರುಖ್ ನಟನೆಯ ‘ಕಿಂಗ್’ (King) ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದಕ್ಕೆ ನಟಿಸಲು ನಟಿಯ ಜೊತೆ ಚಿತ್ರತಂಡ ಚರ್ಚಿಸಲಾಗಿದೆಯಂತೆ. ಈ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮೇ 18ರಿಂದ ‘ಕಿಂಗ್’ ಚಿತ್ರದ ಶೂಟಿಂಗ್‌ಗೆ ಪ್ಲ್ಯಾನ್ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ ದೀಪಿಕಾ ಪಾತ್ರದ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
ಕಳೆದ ವರ್ಷ ಕಲ್ಕಿ 2898 ಎಡಿ, ಸಿಂಗಂ ಅಗೈನ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕಡೆಯದಾಗಿ ನಟಿಸಿದ್ದರು.