– ಹಾವು, ಚೇಳು ಕಚ್ಚಿದ್ರೂ ಔಷಧವಿಲ್ಲ, 99% ಭಾರತವೇ ಆಧಾರ!
ಇಸ್ಲಮಾಬಾದ್: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ (Pahalgam Terror Attack) ನಂತರ ಭಾರತ, ಪಾಕಿಸ್ತಾನದೊಂದಿಗಿನ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದೆ. ಇದರಿಂದ ಪಾಕಿಸ್ತಾನ (Pakistan) ಅಗತ್ಯ ಔಷಧಗಳ (Medicine) ಕೊರತೆ ಎದುರಿಸುತ್ತಿದೆ. ಇದರಿಂದ ಪಾಕಿಸ್ತಾನದ ವೈದ್ಯರೇ ಕೆಲಸ ಬಿಟ್ಟು ಹೋಗುವ ಯೋಚನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
ಭಾರತದ ಜೆನೆರಿಕ್ ಮೆಡಿಸಿನ್ ಮೇಲೆ ಪಾಕಿಸ್ತಾನ ಅವಲಂಬಿತವಾಗಿತ್ತು. ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿದ ಬಳಿಕ ಅನೇಕ ಮಾತ್ರೆಗಳ ತಯಾರಿಸಲು ಕಚ್ಚಾವಸ್ತುಗಳ ಕೊರತೆ ಎದುರಾಗಿದೆ. ಅಲ್ಲಿನ ಜನ ಹಾವು ಕಡಿತಕ್ಕೆ, ಕ್ಯಾನ್ಸರ್‌ಗೆ ಔಷಧವಿಲ್ಲದೇ ಪರದಾಡುತ್ತಿದ್ದಾರೆ. ವಿಟಮಿನ್-ಡಿ, ವಿಟಮಿನ್ ಬಿ1, ವಿಟಮಿನ್ ಬಿ12, ಮಕ್ಕಳಿಗೆ ಮಾಲ್ ನ್ಯೂಟ್ರೀಷನ್ಸ್ ಎಲ್ಲವೂ ಬಂದ್ ಆಗಿವೆ. ಬೇಸಿಕ್ ಮೆಡಿಸಿನ್ ಇಲ್ಲದೆ ಪಾಕಿಸ್ತಾನ ಪರದಾಡುವಂತಾಗಿದೆ.
ಟರ್ಕಿ, ಯೂರೋಪ್, ಅಮೆರಿಕ, ಚೀನಾ ಬಳಿ ಔಷಧಕ್ಕಾಗಿ ಪಾಕಿಸ್ತಾನ ಅಂಗಲಾಚುತ್ತಿದೆ. ಆದರೆ ನಮ್ಮಲ್ಲಿ ಸಿಗುವಷ್ಟು ಕಡಿಮೆ ದರಕ್ಕೆ ಬೇರೆ ದೇಶಗಳಿಂದ ಪಾಕ್‌ಗೆ ಔಷಧ ಸಿಗುವುದಿಲ್ಲ. ಇದರ ನಡುವೆ ಪಾಕಿಸ್ತಾನದ ನಾಯಕರು ಔಷಧ ವ್ಯಾಪಾರ ನಿಷೇಧದಿಂದ ವಿನಾಯಿತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ.
ಏ.22 ರಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಕರ್ನಾಟಕ ಮೂಲದ ಇಬ್ಬರು ಸಾವಿಗೀಡಾಗಿದ್ದರು.