ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತೀಕಾರ ಆಗಲೇಬೇಕು ಎಂದು ಭಾರತ ಪಣತೊಟ್ಟಿದೆ. ಭಾರತದ ಸಶಸ್ತ್ರ ಪಡೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಸಂಪೂರ್ಣ ಸ್ವಾತಂತ್ರ್ಯ ನೀಡಿ ಆದೇಶಿಸಿದ್ದಾರೆ.
ಪ್ರಧಾನ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರನ್ನು ಭೇಟಿ ಈ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಪಾಕ್ ವಿರುದ್ಧ ಮುಂದಿನ 36 ಗಂಟೆಗಳಲ್ಲಿ ಮಿಲಿಟರಿ ಕ್ರಮಕ್ಕೆ ಭಾರತ ಮುಂದಾಗಿದೆ: ಪಾಕ್ ಸಚಿವ
ಭಯೋತ್ಪಾದನೆಗೆ ತಕ್ಕ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಪುನರುಚ್ಚರಿಸಿದ್ದಾರೆ. ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ ಎಂದು ಮೋದಿ ತಿಳಿಸಿದ್ದಾರೆ.
ಸಭೆಯ ಸ್ವಲ್ಪ ಸಮಯದ ನಂತರ, ಗೃಹ ಸಚಿವ ಅಮಿತ್ ಶಾ ಮತ್ತು ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಪ್ರಧಾನ ಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದ್ದರು. ಇದನ್ನೂ ಓದಿ: ಉಗ್ರರು ದಾಳಿ ನಡೆಸಿದ ಬೈಸರನ್ ಕಣಿವೆಯನ್ನು ಮಿನಿ ಸ್ವಿಟ್ಜರ್ಲೆಂಡ್ ಎನ್ನುವುದ್ಯಾಕೆ?
2019 ರ ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯ ನಂತರದ ಅತ್ಯಂತ ಭೀಕರ ದಾಳಿ ಇದಾಗಿದೆ. ಪಹಲ್ಗಾಮ್‌ನಲ್ಲಿ 26 ಜನರನ್ನು ಕೊಂದ ಭಯೋತ್ಪಾದಕರ ವಿರುದ್ಧ ಮಿಲಿಟರಿ ಕ್ರಮಕ್ಕೆ ಪ್ರಧಾನಿಯವರ ಸಂದೇಶವು ಹಸಿರು ನಿಶಾನೆ ತೋರಿಸಿದೆ ಎಂದು ಮೂಲಗಳು ವಿವರಿಸಿವೆ.
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಿಖರವಾದ ವಾಯುದಾಳಿಗಳನ್ನು ನಡೆಸಿತು. ಈ ಶಿಬಿರಗಳನ್ನು ಪಾಕ್ ಸೇನೆಯ ಸಹಾಯದಿಂದ ನಿಷೇಧಿತ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ನಡೆಸುತ್ತಿತ್ತು.