ಬಾಂಗ್ಲಾದೇಶ: ಇಲ್ಲಿನ ರಾಜಧಾನಿಯಲ್ಲಿ ಹಿಂದೂಗಳನ್ನು ಸೇರಿಸಿ ಬೃಹತ್ ಪ್ರತಿಭಟನೆ ನಡೆಸಿದಕ್ಕೆ ಬಂಧಿಸಲಾಗಿದ್ದ ಇಸ್ಕಾನ್ ಸಂಸ್ಥೆಯ ಮಾಜಿ ಧಾರ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ (Chinmoy Krishna Das) ಅವರಿಗೆ ಬಾಂಗ್ಲಾದ ಚಿತ್ತಗಾಂಗ್ ಹೈಕೋರ್ಟ್ (Chittagong HighCourt) 5 ತಿಂಗಳ ಬಳಿಕ ಜಾಮೀನು ನೀಡಿದೆ.
ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ ಚಿನ್ಮಯ್ ಕೃಷ್ಣದಾಸ್‌ರನ್ನು ನವೆಂಬರ್ 25, 2024ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಗಿತ್ತು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಧ್ವನಿಯಾಗಿದ್ದ ಇಸ್ಕಾನ್‌ನ ಚಿನ್ಮಯ್ ಕೃಷ್ಣ ದಾಸ್ ಅರೆಸ್ಟ್
ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಯಾರು?
ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರು ಹಿಂದೂ ಸಂಘಟನೆಯಾದ ಇಸ್ಕಾನ್ ಸಂಸ್ಥಾಪಕರಲ್ಲಿ ಒಬ್ಬರು ಮತ್ತು ಬಾಂಗ್ಲಾದೇಶದ (Bangladesh) ಹಿಂದೂ ಅಲ್ಪಸಂಖ್ಯಾತರ ಪ್ರಮುಖ ವಕೀಲರಾಗಿದ್ದರು. ಸನಾತನ ಜಾಗರಣ್ ಮಂಚ್, ಬಾಂಗ್ಲಾದೇಶ ಸನಾತನ ಜಾಗರಣ ಮಂಚ್ ವಕ್ತಾರರು ಮತ್ತು ಪುಂಡರೀಕ್ ಧಾಮದ ಪ್ರಾಂಶುಪಾಲರಾಗಿದ್ದರು. ಇದನ್ನೂ ಓದಿ: ಪಾಕ್ ವಿರುದ್ಧ ಜಲಯುದ್ಧ – ಚೆನಾಬ್ ನದಿಯ ನೀರಿನ ಮಟ್ಟ ಭಾರೀ ಇಳಿಕೆ
ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಬಗ್ಗೆ ಚಿನ್ಮಯ್ ಕೃಷ್ಣದಾಸ್ ಅವರು ಧ್ವನಿ ಎತ್ತಿದ್ದರು. ಮಾಜಿ ಪ್ರಧಾನಿ ಶೇಖ್ ಹಸೀನಾ ಅಧಿಕಾರದಿಂದ ಕೆಳಗಿಳಿದ ನಂತರ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ನಡೆಯುತ್ತಿತ್ತು. ಮೊಹಮ್ಮದ್ ಯೂನಸ್ ಅವರ ಮಧ್ಯಂತರ ಸರ್ಕಾರವು ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರವನ್ನು ತಡೆಯಲು ವಿಫಲವಾಗಿದೆ ಎಂದು ಟೀಕಿಸಿದ್ದರು.