ಕುಡುಪು ಗುಂಪು ಹತ್ಯೆ ಪ್ರಕರಣ; ಸಿಐಡಿ ತನಿಖೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ಇನಾಯತ್ ಅಲಿ ಆಗ್ರಹ

Public TV
1 Min Read
inayat ali

ಮಂಗಳೂರು: ನಗರದ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಪ್ರಕರಣವನ್ನು ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಮೃತದೇಹದ ಮೇಲೆ ಹಲ್ಲೆ ನಡೆಸಿ ಗಂಭೀರ ಗಾಯಗಳು ಉಂಟಾಗಿರುವುದು ಕಂಡುಬಂದರೂ ಪೊಲೀಸ್ ಇಲಾಖೆ ಕೂಡಲೇ ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳದೆ ಪ್ರಕರಣವನ್ನು ಯುಡಿಆರ್ ಪ್ರಕರಣವೆಂದು ದಾಖಲಿಸಿಕೊಂಡಿರುತ್ತಾರೆ. ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅನುಮಾನ ಮತ್ತು ಆಕ್ರೋಶ ವ್ಯಕ್ತವಾದ ನಂತರ ಕೊಲೆ ಪ್ರಕರಣ ಎಂದು ದಾಖಲಿಸಲಾಗಿದೆ. 24 ಗಂಟೆ ಕಳೆದ ನಂತರವೇ ಇಂತಹ ಗಂಭೀರ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಳಿಗ್ಗೆ ಪಹಲ್ಗಾಮ್‌ನಲ್ಲಿ ಎಂಜಾಯ್ ಮಾಡಿ ಹೋಗಿದ್ವಿ – ಉಗ್ರರ ದಾಳಿಯಿಂದ ಪಾರಾದ ಬೀದರ್ ದಂಪತಿ

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆ ನಡೆಸಿ, ನೈಜ ಆರೋಪಿಗಳನ್ನು ಪತ್ತೆ ಹಚ್ಚುವಂತೆ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾಕ್ ಪರ ಯಾರೇ ಘೋಷಣೆ ಕೂಗಿದ್ರೂ ತಪ್ಪು, ಅದು ದೇಶದ್ರೋಹ: ಸಿಎಂ

Share This Article